
ಪ್ರಜಾವಾಣಿ ವಾರ್ತೆ
ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ಸಮೀಪದ ದಿ.ಪಿಎಸ್‌ಐ ಜಗದೀಶ್ ವೃತ್ತದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಫುಟ್‌ಪಾತ್‌ನಲ್ಲಿದ್ದ ಬಟ್ಟೆ ಅಂಗಡಿಗೆ ಭಾನುವಾರ ಬೆಳಿಗ್ಗೆ ನುಗ್ಗಿದೆ.
ಘಟನೆಯಲ್ಲಿ ಅಂಗಡಿಯಲ್ಲಿದ್ದ ಮಧ್ಯಪ್ರದೇಶ ಮೂಲದ ವ್ಯಾಪಾರಿ ಶರವಣ(28) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದೇವನಹಳ್ಳಿ ಕಡೆಯಿಂದ ಕಬ್ಬಿಣ ಸಾಮಗ್ರಿ ತುಂಬಿಕೊಂಡು ಬಂದ ಲಾರಿ ಯಲಹಂಕ–ಹಿಂದೂಪುರ ರಾಜ್ಯ ಹೆದ್ದಾರಿ ಬದಿಯ ಪಾದಚಾರಿ ಮಾರ್ಗದಲ್ಲೇ ಬೆಡ್ ಶೀಟ್ ಅಂಗಡಿಗಳಿಗೆ ನುಗ್ಗಿದರಿಂದ ನಾಲ್ಕು ಅಂಗಡಿಗಳಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.
ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.