ADVERTISEMENT

ಕಾಂಗ್ರೆಸ್ ಕಾರ್ಯಕರ್ತರ ಸಭೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 2:29 IST
Last Updated 6 ಏಪ್ರಿಲ್ 2021, 2:29 IST
ವಿಜಯಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಮಾತನಾಡಿದರು
ವಿಜಯಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಮಾತನಾಡಿದರು   

ವಿಜಯಪುರ: ‘ಪುರಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಬರುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಇರುವ ಗಟ್ಟಿತನವನ್ನು ಸಾಬೀತುಪಡಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ ಹೇಳಿದರು

ಪಟ್ಟಣದ ಸುಬ್ಬಮ್ಮ ಚನ್ನಪ್ಪ ಸಮುದಾಯಭವನದಲ್ಲಿ ಸೋಮವಾರ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಕಳೆದ ಪುರಸಭೆ ಚುನಾವಣೆಯಲ್ಲಿ 16 ಸ್ಥಾನಗಳಲ್ಲಿ ಕಾಂಗ್ರೆಸ್ ಸದಸ್ಯರನ್ನು ಆಯ್ಕೆ ಮಾಡಿದ್ದರೂ ಉಳಿದ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ವಿಫಲರಾದರು. ಮೀಸಲಾತಿಯ ವಿಷಯದಲ್ಲಿ ಪದೇ ಪದೇ ನ್ಯಾಯಾಲಯದ ಮೊರೆ ಹೋಗಿದ್ದೆ ಚುನಾವಣೆ ಇಷ್ಟೊಂದು ತಡವಾಗಲು ಕಾರಣ. ಅನೇಕ ಬಾರಿಗೆ ಪಕ್ಷದ ಮುಖಂಡರನ್ನು ಎಚ್ಚರಿಸಿದರೂ ಮಾತುಗಳನ್ನು ಆಲಿಸದಿರುವುದು ಖಂಡನೀಯ. ಮುಂದಿನ ದಿನಗಳಲ್ಲಿ ಪಕ್ಷದ ಸಲಹೆ ಸೂಚನೆಗಳನ್ನು ಉಲ್ಲಂಘನೆ ಮಾಡುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

ADVERTISEMENT

ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಮಾತನಾಡಿ, ‘ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಿನ್ನಾಭಿಪ್ರಾಯಗಳನ್ನು ಮರೆತು, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಬದ್ಧತೆಯಿಂದ ಕೆಲಸ ಮಾಡಬೇಕು’ ಎಂದರು.

ಕಾಂಗ್ರೆಸ್ ನಾಯಕ ಮುನಿನರಸಿಂಹಯ್ಯ ಮಾತನಾಡಿ, ‘ಯುವಕರಿಂದ ಪಕ್ಷ ಸದೃಢವಾಗಿದೆ’ ಎಂದರು.

ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಮಾತನಾಡಿ, ‘ಪಟ್ಟಣದಲ್ಲಿನ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ, ಬಣಗಳು ಇಲ್ಲ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ರಾಮಚಂದ್ರಪ್ಪ ಮಾತನಾಡಿ, ‘ಎಲ್ಲಾ ಜಾತಿ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವಂತಹ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ’ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ‘ಪಕ್ಷದ ಕಾರ್ಯಕರ್ತರಿಗೆ ಇರುವಂತಹ ಸಮಸ್ಯೆಗಳನ್ನು ನಿವಾರಣೆ ಮಾಡಲು ಎಲ್ಲಾ ನಾಯಕರು ಸಮರ್ಥರಿದ್ದಾರೆ’ ಎಂದರು.

ಮುಖಂಡರಾದ ಕೆ.ವೆಂಕಟಸ್ವಾಮಿ, ಚಿನ್ನಪ್ಪ, ಜಗನ್ನಾಥ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಬಿ.ಚೇತನ್ ಗೌಡ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಬಿ.ರಾಜಣ್ಣ, ಎಂ.ಸತೀಶ್ ಕುಮಾರ್, ಸಂಪತ್ ಕುಮಾರ್, ಮುಬಾರಕ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಮ್ಮ, ಟೌನ್ ಅಧ್ಯಕ್ಷ ವಿ.ಎಂ.ನಾಗರಾಜ್, ಪ್ರಧಾನ ಕಾರ್ಯದರ್ಶಿ ಎಸ್.ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.