ದೇವನಹಳ್ಳಿ: ಅಮೆರಿಕದ ಚಿಕಾಗೋದಿಂದ ಸೋಮವಾರ ಮುಂಜಾನೆ 5.15ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ವಿಮಾನದಲ್ಲಿ 231 ಮಂದಿ ಅನಿವಾಸಿ ಭಾರತೀಯರು ಬಂದಿಳಿದರು. 231 ಮಂದಿ ಪ್ರಯಾಣಿಕರಲ್ಲಿ 03 ಮಕ್ಕಳು 120 ಪುರುಷರು ಮತ್ತು 108 ಮಹಿಳೆಯರು ಇದ್ದಾರೆ.
ತಜ್ಞ ವೈದ್ಯರು ಹಾಗೂ ಸಿಬ್ಬಂದಿ 231 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಯಾವುದೇ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲ. ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಕಳುಹಿಸಿ ಕೊಡಲಾಗಿದೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.