ನೆಲಮಂಗಲ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ರಾಯರಪಾಳ್ಯದ ಬಳಿ ಸರಣಿ ಅಪಘಾತ ನಡೆದಿದೆ.
ತುಮಕೂರಿನ ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಅವರ ಸಂಬಂಧಿಕರಿಗೂ ಈ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ.
ಕೆಎಸ್‌ಆರ್‌ಟಿಸಿ ಬಸ್, ಇನೋವಾ ಕಾರು ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ.ಯಾವುದೇ ಪ್ರಾಣಾಪಾಯ ಆಗಿಲ್ಲ.
ಸ್ಥಳದಿಂದ ಕಾರು ತೆಗೆದುಕೊಂಡು ಕಾರು ಚಾಲಕ ಪರಾರಿ ಆಗಿದ್ದಾನೆ. ಅಪಘಾತದ ಪರಿಣಾಮಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.
ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.