ADVERTISEMENT

ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಸಾವು

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 17:04 IST
Last Updated 3 ಜುಲೈ 2020, 17:04 IST

ದೊಡ್ಡಬಳ್ಳಾಪುರ: ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿ ಶುಕ್ರವಾರ ರಾತ್ರಿ ಪಾದಚಾರಿಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್‌(52) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನೇಕಾರಿಕೆ ವೃತ್ತಿಯಲ್ಲಿದ್ದ ಕರೇನಹಳ್ಳಿ ನಿವಾಸಿ ಚಂದ್ರಶೇಖರ್‌ ಮನೆಗೆ ತೆರಳುವಾಗ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಇನ್ನು ನೋಂದಣಿ ಸಂಖ್ಯೆಯನ್ನು ಸಹ ಹೊಂದಿರದ ದ್ವಿಚಕ್ರವನ್ನು ಅಪಘಾತ ನಡೆದ ಸ್ಥಳದಲ್ಲಿಯೇ ಬಿಟ್ಟು ಸವಾರರು ಪರಾರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT