ADVERTISEMENT

‘ತ್ಯಾಗ, ಅಹಿಂಸೆ ಅಳವಡಿಸಿಕೊಳ್ಳಿ’

ಆನೇಕಲ್‌ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಶಾಸಕ ಶಿವಣ್ಣ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2019, 13:24 IST
Last Updated 15 ಆಗಸ್ಟ್ 2019, 13:24 IST
ಆನೇಕಲ್‌ನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಹಶೀಲ್ದಾರ್ ಸಿ.ಮಹಾದೇವಯ್ಯ ಧ್ವಜಾರೋಹಣ ನೆರವೇರಿಸಿದರು
ಆನೇಕಲ್‌ನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಹಶೀಲ್ದಾರ್ ಸಿ.ಮಹಾದೇವಯ್ಯ ಧ್ವಜಾರೋಹಣ ನೆರವೇರಿಸಿದರು   

‌ಆನೇಕಲ್:’ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶಭಕ್ತಿ, ತ್ಯಾಗ, ಅಹಿಂಸೆಯ ಮೌಲ್ಯಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು’ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ಪಟ್ಟಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಲಕ್ಷಾಂತರ ಮಂದಿ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದ ದೊರೆತಿರುವ ಸ್ವಾತಂತ್ರ್ಯವನ್ನು ಜತನದಿಂದ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ. ಆಂಗ್ಲರ ದಾಸ್ಯದಿಂದ ಬಿಡುಗಡೆಯಾದ ನಂತರ ದೇಶವು ಹಲವಾರು ಸವಾಲುಗಳನ್ನು ಎದುರಿಸಿದೆ ಎಂದರು.

ADVERTISEMENT

ತಹಶೀಲ್ದಾರ್ ಸಿ.ಮಹಾದೇವಯ್ಯ ಮಾತನಾಡಿ, ಭಾರತೀಯ ಪರಂಪರೆಯ ಶ್ರೇಷ್ಠ ಮೌಲ್ಯಗಳನ್ನು ಸಹೋದರತೆ, ಸ್ವಾತಂತ್ರ್ಯ, ಸಮಾನತೆಯ ತತ್ವದಡಿಯಲ್ಲಿ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಭೀಕರ ಪ್ರವಾಹಕ್ಕೆ 13ಕ್ಕೂ ಹೆಚ್ಚು ಜಿಲ್ಲೆಗಳು ಸಿಲುಕಿವೆ. ಈ ಸಮಸ್ಯೆಗೆ ನಾವೆಲ್ಲಾ ಸ್ಪಂದಿಸಲು ಪರಿಹಾರ ರೂಪದಲ್ಲಿ ನೆರವು ನೀಡಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ಸಂಪತ್ ಮಾತನಾಡಿ, ಭಾರತವು ಒಂದು ಪುಣ್ಯ ಭೂಮಿಯಾಗಿದೆ. ಭಾರತ ಒಂದು ಪುಟ್ಟ ಪ್ರಪಂಚವಿದ್ದಂತೆ ಎಲ್ಲ ದೇಶಗಳ ಹವಾಮಾನ ಸಹ ಭಾರತದ ಒಂದೊಂದು ಪ್ರದೇಶದಲ್ಲಿದೆ ಎಂದರು.

ಪುರಸಭಾ ಸದಸ್ಯರಾದ ರವಿಚೇತನ್, ಕೃಷ್ಣ, ಹೇಮಲತಾ ಸುರೇಶ್, ಕೆ.ಶ್ರೀನಿವಾಸ್, ಭಾರತಿ ವಿರೂಪಾಕ್ಷಪ್ಪ, ಲಲಿತಮ್ಮ, ಅನಿತಾ, ಮಾಲಾ ಭಾರ್ಗವ್‌, ರವಿ, ರಾಜಪ್ಪ, ಶ್ರೀಕಾಂತ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಮುನಿರತ್ನಮ್ಮ, ಚಂದ್ರಕಲಾ ಮುನಿರಾಜು, ಪುಷ್ಪರಾಜು, ಸಮಾಜ ಕಲ್ಯಾಣ ಮಂಡಳಿಯ ನಿರ್ದೇಶಕ ನರಸಿಂಹಮೂರ್ತಿ, ಆನೇಕಲ್‌ ಟಿಎಪಿಸಿಎಂಎಸ್‌ ಅಧ್ಯಕ್ಷ ಮಂಜುನಾಥ್‌ರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ದೇವರಾಜಗೌಡ, ಪುರಸಭಾ ಮುಖ್ಯಾಧಿಕಾರಿ ಬಿ.ಎಸ್.ಸುಮಾ ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ.ರಮೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜ್ಞಾನಪ್ರಕಾಶ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ್, ದೈಹಿಕ ಶಿಕ್ಷಣಾಧಿಕಾರಿ ಡಿ.ಎನ್.ವೀರಭದ್ರಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಶಿವಣ್ಣ, ಖಜಾಂಚಿ ಜಿ.ನಾಗರಾಜು, ನಿರ್ದೇಶಕರಾದ ಎಚ್.ಮಂಜುನಾಥ್, ಪ್ರಕಾಶ್, ರಾಜೇಶ್, ಮಾಜಿ ಅಧ್ಯಕ್ಷ ವಿ.ಕೆ.ಗವಿರಂಗಯ್ಯ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಾಲ್, ಮುಖಂಡರಾದ ಜಿ.ಗೋಪಾಲ್, ಮಲ್ಲಿಕಾರ್ಜುನ್, ಮುರಳಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.