ADVERTISEMENT

ಸಾಂವಿಧಾನಾತ್ಮಕವಾಗಿ ಸಮಸ್ಯೆ ಪರಿಹಾರಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2019, 13:32 IST
Last Updated 20 ಆಗಸ್ಟ್ 2019, 13:32 IST
ದೇವರಾಜ ಅರಸು ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಪುಷ್ಪನಮನ ಸಲ್ಲಿಸಿದರು
ದೇವರಾಜ ಅರಸು ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಪುಷ್ಪನಮನ ಸಲ್ಲಿಸಿದರು   

ದೇವನಹಳ್ಳಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಿ.ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಅಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

‘ಜಾತಿ, ಧರ್ಮ, ಪ್ರದೇಶ, ಮತ, ಭಾಷಾ ಭೇದವಿಲ್ಲದೆ ಭಾರತದ ಎಲ್ಲ‌ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ವೈಯಕ್ತಿಕ ಹಾಗೂ ಸಾಮೂಹಿಕವಾಗಿ ಎಲ್ಲ ರೀತಿಯ ಭೇದಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ, ಸಮಾಲೋಚನೆ ಮತ್ತು ಸಾಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹನುಮಂತರಾಯಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ಆರ್. ಭವ್ಯಾ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.