ADVERTISEMENT

ಪ್ರಜಾಪ್ರಭುತ್ವದ ಮೌಲ್ಯ ಕಾಪಾಡಲು ಸಲಹೆ : ಶಾಸಕ ಶರತ್‌ ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 5:15 IST
Last Updated 27 ಜನವರಿ 2023, 5:15 IST
ಹೊಸಕೋಟೆಯಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಶಾಸಕ ಶರತ್‌ ಬಚ್ಚೇಗೌಡ ಗೌರವ ವಂದನೆ ಸ್ವೀಕರಿಸಿದರು
ಹೊಸಕೋಟೆಯಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಶಾಸಕ ಶರತ್‌ ಬಚ್ಚೇಗೌಡ ಗೌರವ ವಂದನೆ ಸ್ವೀಕರಿಸಿದರು   

ಹೊಸಕೋಟೆ: ದೇಶದಲ್ಲಿರುವ ಎಲ್ಲಾ ಜನತೆಯ ಮೇಲೂ ಪ್ರಭಾವ ಬೀರುವ ಶ್ರೇಷ್ಠ ಗ್ರಂಥವೆಂದರೆ ಡಾ.ಬಿ.ಆರ್. ಅಂಬೇಡ್ಕರ್‌ ರಚಿಸಿರುವ ಸಂವಿಧಾನವಾಗಿದೆ. ಎಲ್ಲರೂ ಒಗ್ಗಟ್ಟಾಗಿ ದೇಶವನ್ನು ಪ್ರಗತಿಯತ್ತ ನಡೆಸಬೇಕಿದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಅಭಿಪ್ರಾಯಪಟ್ಟರು.

ಪಟ್ಟಣದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಗುರುವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಆಶಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯಾಂಗ, ಶಾಸಕಾಂಗ ಕರ್ತವ್ಯ ನಿರ್ವಹಿಸಬೇಕು ಎಂದು
ಹೇಳಿದರು.

ADVERTISEMENT

ತಹಶೀಲ್ದಾರ್ ಮಹೇಶ್‌ ಕುಮಾರ್‌ ಮಾತನಾಡಿ, ಸಂವಿಧಾನ ಜಾರಿಯಿಂದ ಇಂದು ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ದೊರೆಯುತ್ತಿದೆ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಡಿ.ಕೆ. ನಾಗರಾಜ್‌, ಉಪಾಧ್ಯಕ್ಷೆ ಸುಗುಣ ಮೋಹನ್‌, ಸ್ಥಾಯಿ ಸಮಿತಿ ಅಧ್ಯಕ್ಷ ರೋಷನ್‌, ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್‌, ನಗರಸಭೆ ಪೌರಾಯುಕ್ತ ಪ್ರಸಾದ್‌, ಬಿಇಒ ವಿವೇಕಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.