`ಏರೋ ಇಂಡಿಯಾ'
(ಸಂಗ್ರಹ ಚಿತ್ರ)
ದೇವನಹಳ್ಳಿ: ಯಲಹಂಕ ವಾಯುನೆಲೆಯಲ್ಲಿ ಫೆ.5ರಿಂದ 14ರವರೆಗೂ ನಡೆಯಲಿರುವ ಏರೋ ಇಂಡಿಯಾ 2025 ಪ್ರದರ್ಶನದ ಹಿನ್ನೆಲೆಯಲ್ಲಿ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗೆ ತಾತ್ಕಾಲಿಕ ಅಡಚಣೆ ಉಂಟಾಗಲಿದೆ. ಏಷ್ಯಾದ ಪ್ರಮುಖ ಮಿಲಿಟರಿ ವಾಯುಯಾನ ಕಾರ್ಯಕ್ರಮದಿಂದಾಗಿ 10 ದಿನಗಳ ಅವಧಿಯಲ್ಲಿ ಒಟ್ಟು 47 ಗಂಟೆಗಳ ಕಾಲ ವಿಮಾನ ಸಂಚಾರಕ್ಕೆ ಬದಲಾವಣೆಯಾಗಲಿದೆ.
ಏರೋ ಇಂಡಿಯಾದ 15ನೇ ಆವೃತ್ತಿ ಫೆಬ್ರುವರಿ 10ರಿಂದ 14ರವರೆಗೆ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ನಡೆಯಲಿದೆ. ಪೂರ್ವಾಭ್ಯಾಸ ಮತ್ತು ಬಹುನಿರೀಕ್ಷಿತ ವೈಮಾನಿಕ ಪ್ರದರ್ಶನ ಸೇರಿದಂತೆ ಮಹತ್ವದ ಕಾರ್ಯಕ್ರಮ ಸಿದ್ಧತೆ ನಡೆಯಬೇಕಿದೆ. ಇದು ವಾಯುಪ್ರದೇಶ ನಿರ್ಬಂಧಗಳಿಗೆ ಪ್ರಾಥಮಿಕ ಕಾರಣವಾಗಿದೆ. ಈ ಪ್ರದೇಶ ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪದಲ್ಲೇ ಇದೆ. ಈ ದಿನಗಳಲ್ಲಿ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.