ADVERTISEMENT

ದೊಡ್ಡಬಳ್ಳಾಪುರ: ಅಕ್ಕಮಹಾದೇವಿ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2025, 14:17 IST
Last Updated 12 ಏಪ್ರಿಲ್ 2025, 14:17 IST
<div class="paragraphs"><p>ದೊಡ್ಡಬಳ್ಳಾಪುರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ನಡೆದ ಅಕ್ಕಮಹಾದೇವಿ ಜಯಂತಿಯಲ್ಲಿ ಶಾಸಕ ಧೀರಜ್‌ ಮುನಿರಾಜು ಹಾಗೂ ಇತರರು ಇದ್ದರು</p></div>

ದೊಡ್ಡಬಳ್ಳಾಪುರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ನಡೆದ ಅಕ್ಕಮಹಾದೇವಿ ಜಯಂತಿಯಲ್ಲಿ ಶಾಸಕ ಧೀರಜ್‌ ಮುನಿರಾಜು ಹಾಗೂ ಇತರರು ಇದ್ದರು

   

ದೊಡ್ಡಬಳ್ಳಾಪುರ: ಶಿವಶರಣೆ, ವಚನಗಾರ್ತಿ ಅಕ್ಕಮಹಾದೇವಿ ಜಯಂತಿಯನ್ನು ತಾಲ್ಲೂಕಿನ ವಿವಿಧೆಡೆಗಳಲ್ಲಿ ಶನಿವಾರ ಆಚರಿಸಲಾಯಿತು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲ್ಲೂಕು ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಧೀರಜ್‌ ಮುನಿರಾಜು, ಅಕ್ಕಮಹಾದೇವಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ADVERTISEMENT

12ನೇ ಶತಮಾನದ ವಚನಕಾರರಲ್ಲಿ ಅಕ್ಕಮಹಾದೇವಿ ಪ್ರಮುಖರಾಗಿದ್ದಾರೆ. ಅಧಿಕಾರ, ಸಂಪತ್ತು, ವೈಭವ, ಆಡಂಬರ, ಭೋಗ ಜೀವನಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದರು. ಎಲ್ಲ ಬಂಧನಗಳಿಂದ ಬಿಡುಗಡೆ ಪಡೆದು ಸಾಮಾನ್ಯರಲ್ಲಿ ಸಾಮಾನ್ಯಳಂತೆ ಜನ ಜೀವನದಲ್ಲಿ ಬೆರೆತು ಬದುಕಿನ ಮೌಲ್ಯಗಳನ್ನು ವಚನಗಳ ಮೂಲಕ ಪ್ರತಿಪಾದಿಸಿದರು. ಅಕ್ಕನ ವಚನಗಳ ಸಾರವನ್ನು ಇಂದಿನ ವಿದ್ಯಾರ್ಥಿಗಳಿಗೆ ಮುಟ್ಟಿಸುವ ಕಾರ್ಯವಾಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ನಾಗೇಶ್, ಕಸಬಾ ಗ್ರಾಮ ಲೆಕ್ಕಿಗ ರಾಜೇಂದ್ರಬಾಬು ಇದ್ದರು.

ಅಕ್ಕನ ಬಳಗದಿಂದ: ದೇಶದ ಪೇಟೆ ವೀರಶೈವ ಸಂಘ ಹಾಗೂ ಅಕ್ಕನ ಬಳಗ ಮಹಿಳಾ ಸಂಘದಿಂದ ನಗರದ ಶ್ರೀ ಬಸವೇಶ್ವರ ದೇವಾಲಯದಲ್ಲಿ ಅಕ್ಕಮಹಾದೇವಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.