ADVERTISEMENT

ಜಂತುಹುಳು ನಿವಾರಣೆಗೆ ಪೋಷಕರ ಸಹಕಾರ ಅಗತ್ಯ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2020, 12:53 IST
Last Updated 11 ಫೆಬ್ರುವರಿ 2020, 12:53 IST
ಹೊಸಕೋಟೆಯ ಜಿಕೆಬಿಎಂಎಸ್ ಶಾಲೆಯಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ತಾಲ್ಲೂಕು ಶಿಕ್ಷಣ ಇಲಾಖೆ ವತಿಯಿಂದ ಜಂತುಹುಳು ನಿವಾರಣಾ ಕಾರ್ಯಕ್ರಮದ ನಿಮಿತ್ತ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲಾಯಿತು.
ಹೊಸಕೋಟೆಯ ಜಿಕೆಬಿಎಂಎಸ್ ಶಾಲೆಯಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ತಾಲ್ಲೂಕು ಶಿಕ್ಷಣ ಇಲಾಖೆ ವತಿಯಿಂದ ಜಂತುಹುಳು ನಿವಾರಣಾ ಕಾರ್ಯಕ್ರಮದ ನಿಮಿತ್ತ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲಾಯಿತು.   

ಹೊಸಕೋಟೆ: ಚಿಕ್ಕ ಮಕ್ಕಳಲ್ಲಿ ಕಂಡು ಬರುವ ಹಲವಾರು ಕಾಯಿಲೆಗಳಿಗೆ ಜಂತುಹುಳಗಳು ಕಾರಣವಾಗಿದ್ದು ಅದನ್ನು ನಿವಾರಣೆ ಮಾಡುವ ದೃಷ್ಟಿಯಿಂದ ಆರೋಗ್ಯ ಇಲಾಖೆ ಹಲವಾರು ಕಾರ್ಯಕ್ರಮ ರೂಪಿಸಿದ್ದು ಪೋಷಕರ ಸಹಕಾರ ಅತ್ಯಗತ್ಯ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಮಂಜುನಾಥ್ ತಿಳಿಸಿದರು.

ಅವರು ನಗರದ ಜಿಕೆಬಿಎಂಎಸ್ ಶಾಲೆಯಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಹೊಸಕೋಟೆ ತಾಲ್ಲೂಕಿನಲ್ಲಿ ಕಳೆದ ಬಾರಿ 1ರಿಂದ 5 ವರ್ಷದ 23,007 ಮಕ್ಕಳು, 6 ರಿಂದ 19 ವರ್ಷದ 57,736 ಮಕ್ಕಳು, ಶಾಲೆಯಿಂದ ಹೊರಗುಳಿದ 6ರಿಂದ 19 ವರ್ಷದ 893 ಮಕ್ಕಳಿದ್ದು ಒಟ್ಟು 1ರಿಂದ 19 ವರ್ಷದ 81,636 ಮಕ್ಕಳಿಗೂ ಜಂತುಹುಳು ಮಾತ್ರೆ ವಿತರಣೆ ಮಾಡಲಾಗಿತ್ತು. ಜಂತುಹುಳುವಿನಿಂದ ಮಕ್ಕಳಲ್ಲಿ ಅಧಿಕ ರಕ್ತಹೀನತೆ, ಮಾನಸಿಕ ಅಸ್ವಸ್ಥತೆ ಕಂಡು ಬರುವ ಸಾಧ್ಯತೆಗಳು ಹೆಚ್ಚಿದ್ದು ನಿವಾರಣೆಗೆ ಸರ್ಕಾರದಿಂದ ಉಚಿತವಾಗಿ ಮಾತ್ರೆಗಳನ್ನು ವಿತರಣೆ ಮಾಡಲಾಗುತ್ತಿದೆ. ತಾಲ್ಲೂಕಿನಾದ್ಯಂತ ಮೂರು ತಂಡಗಳನ್ನು ಮಾಡಲಾಗಿದ್ದು ಪ್ರತಿ ತಂಡದಲ್ಲಿ ವೈದ್ಯರು, ಸಹಾಯಕರು ಹಾಗೂ ಸಿಬ್ಬಂಧಿ ಇದ್ದು ತಾಲ್ಲೂಕಿನ ಪ್ರತಿಯೊಂದು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಪ್ರತಿಯೊಂದು ಮಗುವಿಗೂ ನೀಡಲಾಗುತ್ತದೆ’ ಎಂದರು.

ADVERTISEMENT

ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ, ಶಾಲಾ ಮುಖ್ಯ ಶಿಕ್ಷಕ ರಮೇಶ, ಹಿರಿಯ ಆರೋಗ್ಯ ಸಹಾಯಕ ರವಿ, ಅಂಬಿಕಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.