ADVERTISEMENT

ಆನೇಕಲ್ | ಟ್ರ್ಯಾಕ್ಟರ್‌ ಡಿಕ್ಕಿ: ಶಿಕ್ಷಕಿ ಸಾವು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 4:56 IST
Last Updated 17 ಫೆಬ್ರುವರಿ 2026, 4:56 IST
ಯೋಗೇಶ್ವರಿ
ಯೋಗೇಶ್ವರಿ   

ಆನೇಕಲ್: ಪಟ್ಟಣದ ಜಿಗಣಿ ರಸ್ತೆಯಲ್ಲಿ ಸೋಮವಾರ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಶಾಲೆಗೆ ಹೊರಟಿದ್ದ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ತಾಲ್ಲೂಕಿನ ಲಕ್ಷ್ಮೀಪುರದ ಸರ್ಕಾರಿ ಶಾಲೆಯ ಶಿಕ್ಷಕಿ ಯೋಗೇಶ್ವರಿ(46) ಮೃತ ದುರ್ದೈವಿ. 

ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಶಾಲೆಗೆ ಹೊರಟಿದ್ದ ಯೋಗೇಶ್ವರಿ ಅವರಿಗೆ ಜಿಗಣಿ ರಸ್ತೆಯಲ್ಲಿ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟರು. 

ADVERTISEMENT

ಆನೇಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟ್ರ್ಯಾಕ್ಟರ್‌ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.