ಪ್ರಾತಿನಿಧಿಕ ಚಿತ್ರ
ಆನೇಕಲ್ : ಬೆಂಗಳೂರು ನಗರ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 300 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.
ಪಟ್ಟಣದ ಪುರಸಭಾ ಕಚೇರಿಯಲ್ಲಿ ಶನಿವಾರ ನಡೆದ ದಲಿತ ಸಂಘಟನೆಗಳ ಹಕ್ಕೊತ್ತಾಯಗಳ ಸಭೆಯಲ್ಲಿ ಮಾತನಾಡಿದ ಅವರು, ಆನೇಕಲ್ ತಾಲ್ಲೂಕಿನಲ್ಲಿ 68 ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ ಎಂದರು.
ಅರ್ಹ ಫಲಾನುಭವಿಗಳನ್ನು ಗುರುತಿಸಿ 94ಸಿ ಅಡಿಯಲ್ಲಿ ಹಕ್ಕುಪತ್ರ ವಿತರಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಮೂನೆ 53 ಅಡಿಯಲ್ಲಿ ಹಕ್ಕುಪತ್ರಗಳನ್ನು ಪಡೆಯಲು ನ್ಯಾಯಾಲಯದ ಮಾರ್ಗಸೂಚಿಗಳಂತೆ ಬಗರ್ ಹುಕುಂ ಸಾಗುವಳಿದಾರರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.