ಸಾವು (ಪ್ರಾತಿನಿಧಿಕ ಚಿತ್ರ)
ಆನೇಕಲ್: ಸೂರ್ಯಸಿಟಿ ಸಮೀಪದ ಹಳೆ ಚಂದಾಪುರ ಬಳಿ ಯುವಕನೊಬ್ಬ ತನ್ನ ತಾಯಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲಕ್ಷ್ಮಿದೇವಿ(41) ಎಂಬ ಮಹಿಳೆಯನ್ನು ಆಕೆಯ ಮಗ ರಮೇಶ್ (21) ಮೊಬೈಲ್ ಚಾರ್ಜಿಂಗ್ ವೈರ್ ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಚಿಕ್ಕಹಳ್ಳಿಯ ಈ ಕುಟುಂಬ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬೆಂಗಳೂರಿಗೆ ಬಂದಿತ್ತು.
ಬೆಂಗಳೂರು ಹೊರವಲಯ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ವಾಸವಿದ್ದರು. ಕೂಲಿ ಮಾಡಿಕೊಂಡು ಕುಟುಂಬ ಜೀವನ ಸಾಗಿಸುತ್ತಿತು.
ತಾಯಿ ಕೂಲಿ ಕೆಲಸ ಮಾಡುತ್ತಿದ್ದರು. ಯುವಕನ ತಂದೆ ಮತ್ತು ಸಹೋದರ ಜೊತೆಯಲ್ಲಿದ್ದರು. ಯುವಕನ ತಂದೆ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು.
ಮಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಶನಿವಾರ ರಾತ್ರಿಯೂ ಕುಡಿದು ಬಂದು ತಾಯಿ ಲಕ್ಷ್ಮಿದೇವಿ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ತಾಯಿ, ಮಗನ ಸಾವಿನಲ್ಲಿ ಅಂತ್ಯಗೊಂಡಿದೆ.
ಸ್ಥಳಕ್ಕೆ ಸೂರ್ಯನಗರ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದರು. ಮೃತ ದೇಹಗಳನ್ನ ಅತ್ತಿಬೆಲೆ ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.