
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಆನೇಕಲ್: ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹಾಲ್ದೇನಹಳ್ಳಿ ಸಮೀಪ ಬುಧವಾರ ರಾತ್ರಿ ದ್ವಿಚಕ್ರ ವಾಹನ ಮತ್ತು ಲಾರಿಯ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ತಮಿಳುನಾಡು ಡೆಂಕಣಿಕೋಟೆಯ ಮಾರಪ್ಪ(49) ಮೃತರು.
ಮಾರಪ್ಪ ಅತ್ತಿಬೆಲೆಯಿಂದ ಆನೇಕಲ್‌ನತ್ತ ಬರುತ್ತಿದ್ದರು. ಲಾರಿಯು ಆನೇಕಲ್‌ನಿಂದ ಅತ್ತಿಬೆಲೆಯತ್ತ ಹೋಗುತ್ತಿತ್ತು. ಓವರ್‌ಟೆಕ್ ಮಾಡಿ ಎಡಕ್ಕೆ ಹೋಗುವ ಸಂದರ್ಭದಲ್ಲಿ ದ್ವಿಚಕ್ರ ವಾಹನವು ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಮಾರಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಲಾರಿ ಚಾಲಕನನ್ನು ಆನೇಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.