ಆನೇಕಲ್: ತಾಲ್ಲೂಕಿನ ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಾಪುರದ ಸೂರ್ಯಸಿಟಿ ಸಮೀಪ ಬಿಎಂಟಿಸಿ ಬಸ್ ಪಾದಚಾರಿ ವ್ಯಕ್ತಿಗೆ ಡಿಕ್ಕಿ ಹೊಡೆದು ಮೃತಪಟ್ಟದ್ದಾರೆ.
ಕೇರಳದ ಅನಿಲ್ ಕುಮಾರ್(40) ಮೃತರು.
ಶುಕ್ರವಾರ ರಾತ್ರಿ 11ರ ಸುಮಾರಿನಲ್ಲಿ ಹೋಟೆಲ್‌ವೊಂದರಲ್ಲಿ ಊಟ ಮಾಡಿ ನಡೆದು ಹೋಗುತ್ತಿದ್ದಾಗ ಆನೇಕಲ್ ಕಡೆಯಿಂದ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಅನಿಲ್ ಕುಮಾರ್ ತೀವ್ರ ಗಾಯಗೊಂಡರು. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಚಂದಾಪುರ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.