ಸಾವು
(ಪ್ರಾತಿನಿಧಿಕ ಚಿತ್ರ)
ಆನೇಕಲ್: ಕುಡಿದ ನಶೆಯಲ್ಲಿ ಬಿಹಾರ ಮೂಲದ ಕಾರ್ಮಿಕರ ನಡುವೆ ನಡೆದ ಮಾರಾಮಾರಿ ಮೂವರು ಕೊಲೆಯಲ್ಲಿ ಅಂತ್ಯವಾಗಿದೆ. ತಾಲೂಕಿನ ಸರ್ಜಾಪುರ ತಿಂಡ್ಲು ಗೇಟ್ ಸಮೀಪದ ಫೋರ್ ವಾಲ್ ಅವಿನ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಬಿಹಾರದ ಅನ್ಸು (19), ರಾಧೆ ಶ್ಯಾಮ್ (22) ಕೊಲೆಯಾದವರು. ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಹೋಳಿ ಹಬ್ಬ ಆಚರಣೆ ನಂತರ ಪರಸ್ಪರ ಘರ್ಷಣೆ ಮಾಡಿಕೊಂಡಿದ್ದರು. ಘರ್ಷಣೆ ವಿಕೋಪಕ್ಕೆ ತಿರುಗಿ ಮದ್ಯದ ಬಾಟಲಿಗಳಿಂದ ಹೊಡೆದಾಡಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ವ್ಯಕ್ತಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದರು. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಮದ್ಯದ ಪಾರ್ಟಿ ಮಾಡಿದ್ದ ಕಾರ್ಮಿಕರು, ಪರಸ್ಪರ ಜಗಳವಾಡಿಕೊಂಡು ಕೈಗೆ ಸಿಕ್ಕ ದೊಣ್ಣೆ, ರಾಡ್ ಮತ್ತು ಮದ್ಯದ ಬಾಟಲಿನಿಂದ ಹೊಡೆದಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರ್ಜಾಪುರ ಪೊಲೀಸ್ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.