
ಪ್ರಜಾವಾಣಿ ವಾರ್ತೆ
ಆನೇಕಲ್: ಪಟ್ಟಣದ ಚನ್ನಕೇಶವ ದೇವಾಲಯದಲ್ಲಿ ಬುಧವಾರ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಪಟ್ಟಣದ ವಿವಿಧ ವಾರ್ಡ್‌ಗಳ ಭಕ್ತರು ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಚನ್ನಕೇಶವ ಅಲಂಕೃತ ಉತ್ಸವ ಮೂರ್ತಿಯನ್ನು ರಥದಲ್ಲಿಟ್ಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಥವನ್ನು ಎಳೆಯಲಾಯಿತು. ಡೋಲು ನಾದಸ್ವರ, ಡೊಳ್ಳುಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಜಾತ್ರೆಗೆ ಮೆರುಗು ನೀಡಿದವು.
ರಾಮಚಂದ್ರ ಭಟ್ಟರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಉತ್ಸವ ಮೂರ್ತಿಯನ್ನು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಮತ್ತು ಭಕ್ತರು ಹೊತ್ತು ದೇವಾಲಯದ ಸುತ್ತಲೂ ಮೂರು ಪ್ರದಕ್ಷಿಣೆ ಹಾಕಿ ರಥದಲ್ಲಿ ಕುಳ್ಳಿರಿಸಲಾಯಿತು. ರಥವು ತಿಲಕ್ ವೃತ್ತ, ಚರ್ಚ್ ರಸ್ತೆ ಮಾರ್ಗವಾಗಿ ಚನ್ನಕೇಶವ ದೇವಾಲಯದ ತಲುಪಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.