
ಆನೇಕಲ್: ತಾಲ್ಲೂಕಿನ ಚಿಕ್ಕನಾಗಮಂಗಲ ಗ್ರಾಮದ ಬಳಿ ಇರುವ ಬಿಬಿಎಂಪಿ ಘನತ್ಯಾಜ್ಯ ಸಂಸ್ಕರಣ ಘಟಕವನ್ನು ಬೇರಡೆಗೆ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಸ್ಥಳೀಯರು ಮತ್ತು ಅಪಾರ್ಟ್‌ಮೆಂಟ್ ನಿವಾಸಿಗಳು ಘಟಕದ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.
ಚಿಕ್ಕನಾಗಮಂಗಲದ ಬಿಬಿಎಂಪಿ ಘನತ್ಯಾಜ್ಯ ಸಂಸ್ಕರಣ ಘಟಕದಿಂದಾಗಿ ಸುತ್ತಲಿನ ಪರಿಸರ ಕಲುಷಿತಗೊಳ್ಳುತ್ತಿದೆ. ಸ್ಥಳೀಯರು ಆರೋಗ್ಯ ಸಮಸ್ಯೆಯಿಂದ ಪರದಾಡುವ ಉಂಟಾಗಿದೆ. ಸಂಸ್ಕರಣ ಘಟಕದಿಂದ ಹೊರಬರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದಾಗಿ ಗ್ರಾಮಸ್ಥರು ಪರದಾಡುವಂತಾಗಿದೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರಾಜೇಶ್ ರೆಡ್ಡಿ ತಿಳಿಸಿದರು.
ಘನತ್ಯಾಜ್ಯ ಸಂಸ್ಕರಣ ಘಟಕದಿಂದಾಗಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಇಲ್ಲದಂತಾಗಿದೆ ಹಾಗಾಗಿ ಸರ್ಕಾರ ದೊಡ್ಡ ನಾಗಮಂಗಲ ಗ್ರಾಮಕ್ಕೆ ಕಾವೇರಿ ನೀರು ಪೂರೈಸಬೇಕು. ಘಟಕದಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ ಎಂದು ಅಳಲು ತೋಡಿಕೊಂಡರು.
ಸಂಬಂಧಪಟ್ಟ ಅಧಿಕಾರಿಗಳು ಪ್ರತಿದಿನ ಔಷಧಿಯನ್ನು ಸಿಂಪಡಿಸಬೇಕು. ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಬಂಧಿಸಿದಂತೆ ಸರ್ಕಾರವು ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ದೊಡ್ಡನಾಗಮಂಗಲ ಆಂಜಿ, ಸುರೇಶ್, ಮೋಹನ್, ರಾಜು, ಕೇಬಲ್ ರಾಜು, ದಿನೇಶ್, ಪ್ರಣಯ್, ಅಮರ್, ರವಿತೇಜ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.