ಆನೇಕಲ್: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಒಂದೇ ದಿನ 92 ಕೊರೊನಾ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ತಾಲ್ಲೂಕಿನಲ್ಲಿ ಒಟ್ಟು 292 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್ ತಿಳಿಸಿದರು.
10 ದಿನಗಳ ಅವಧಿಯಲ್ಲಿ ಒಟ್ಟು 292 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 254 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 38 ಮಂದಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಹೆಬ್ಬಗೋಡಿ, ಚಂದಾಪುರ, ಜಿಗಣಿಗಳಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗುತ್ತಿವೆ. ಪ್ರತಿದಿನ 4,000-4,500 ಮಂದಿಯ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಮುಂಬರುದ ದಿನಗಳಲ್ಲಿ ದಿನಕ್ಕೆ 6 ಸಾವಿರ ಮಂದಿಯನ್ನು ಪರೀಕ್ಷಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.