ಆನೇಕಲ್ : ತಾಲ್ಲೂಕಿನ ಬಸವನಪುರದ ರಾಕ್‌ವುಡ್ ಗ್ರೀನ್ ಪಬ್ಲಿಕ್ ಶಾಲೆಯಲ್ಲಿ ಆಕಾಶವಾಣಿ ಬೆಂಗಳೂರು ಮತ್ತು ಮೀಡಿಯಾ ಅಲುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ ಹಾಗೂ ಶಾರದ ವಿಕಾಸ ಟ್ರಸ್ಟ್ ಸಹಯೋಗದಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಆಧುನಿಕ ಯುಗದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಸೈಬರ್ ಕ್ರಿಮಿನಲ್‌ಗಳು ಮೋಸದಿಂದ ನಿಮ್ಮ ಬ್ಯಾಂಕ್ ಖಾತೆ, ವೈಯಕ್ತಿಕ ವಿವರಗಳಿಗೆ ಕನ್ನ ಹಾಕಿ ನಿಮ್ಮನ್ನು ಸಂಕಷ್ಟಕ್ಕೆ ತಳ್ಳುತ್ತಾರೆ. ಈ ಬಗ್ಗೆ ಜನರು ಎಚ್ಚರವಹಿಸಬೇಕೆಂದು ಹೇಳಿದರು.
ಡಿಜಿಟಲ್ ಬಂಧನ, ಆನ್‌ಲೈನ್ ಟ್ರೇಡಿಂಗ್ ವಂಚನೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ವಂಚನೆ, ಹಣದ ಬ್ಲಾಕ್ ಮೇಲ್ ಮುಂತಾದ ಸೈಬರ್ ವಂಚನೆಯಿಂದ ದೂರವಿರಲು ಬಹಳ ಎಚ್ಚರಿಕೆ ಅವಶ್ಯಕ ಎಂದರು.
ಆಕಾಶವಾಣಿಯ ಸಹಾಯಕ ನಿರ್ದೇಶಕ ಡಾ.ಎ.ಎಸ್.ಶಂಕರನಾರಾಯಣ ಮಾತನಾಡಿದರು. ವಿಜಿಎಸ್ಎಲ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ವಿ.ವೆಂಕಟಾಚಲಪತಿ, ಮಾಧ್ಯಮ ಹಳೆಯ ವಿದ್ಯಾರ್ಥಿಗಳ ಸಂಘ ಮಂಗಳಗಂಗೋತ್ರಿ ಅಧ್ಯಕ್ಷ ನವೀನ್ ಅಮ್ಮೆಂಬಳ, ಡೇಟಾ ಭದ್ರತೆ ಕೌನ್ಸಿಲ್ ಆಫ್ ಇಂಡಿಯಾ ಹಿರಿಯ ನಿರ್ದೇಶಕ ಕೆ.ವೆಂಕಟೇಶ ಮೂರ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.