ಆನೇಕಲ್: ತಾಲ್ಲೂಕಿನ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ರಾಚಮಾನಹಳ್ಳಿಯಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಭಾವನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಬಿಹಾರದ ಮುಖೇಶ್ ಕುಮಾರ್ ರವಿದಾಸ್ (33) ಕೊಲೆಯಾದರು. ಆರೋಪಿ ಚೋಟು ಕುಮಾರ್‌ನನ್ನು ಬಂಧಿಸಲಾಗಿದೆ.
ಮುಖೇಶ್ ಕುಮಾರ್ ರವಿದಾಸ್ ಮತ್ತು ಚೋಟು ಕುಮಾರ್ ದಾಸ್ ಭಾವ ಬಾಮೈದರಾಗಿದ್ದು, ಗಾರೆ ಕೆಲಸ ಮಾಡುತ್ತಿದ್ದರು. ಭಾನುವಾರ ಸಂಬಳದ ದಿನವಾಗಿದ್ದರಿಂದ ಕುಡಿದು ಮೋಜುಮಸ್ತಿ ಮಾಡಿದ್ದಾರೆ. ಕುಡಿದ ನಶೆಯಲ್ಲಿ ಪರಸ್ಪರ ಜಗಳವಾಡಿ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಚೋಟು ಮುಖೇಶ್ ಕುಮಾರ್‌ಗೆ ದೊಣ್ಣೆಯಿಂದ ಹೊಡೆದಿದ್ದರಿಂದ ಮುಖೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.