ADVERTISEMENT

ಗುಡಿ ಕೈಗಾರಿಕೆಗೆ ಪ್ರೋತ್ಸಾಹ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 3:07 IST
Last Updated 25 ಸೆಪ್ಟೆಂಬರ್ 2025, 3:07 IST
ಆನೇಕಲ್ ತಾಲ್ಲೂಕು ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕಾ ವಿವಿದ್ದೋದ್ದೇಶ ಸಹಕಾರ ಸಂಘ ನಿಯಮಿತ ನವೀಕೃತ ಕಟ್ಟಡವನ್ನು ಸಂಘದ ಅಧ್ಯಕ್ಷ ಪಿ.ಮಂಜುನಾಥ ಉದ್ಘಾಟಿಸಿದರು
ಆನೇಕಲ್ ತಾಲ್ಲೂಕು ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕಾ ವಿವಿದ್ದೋದ್ದೇಶ ಸಹಕಾರ ಸಂಘ ನಿಯಮಿತ ನವೀಕೃತ ಕಟ್ಟಡವನ್ನು ಸಂಘದ ಅಧ್ಯಕ್ಷ ಪಿ.ಮಂಜುನಾಥ ಉದ್ಘಾಟಿಸಿದರು   

ಆನೇಕಲ್: ಆನೇಕಲ್‌ ತಾಲ್ಲೂಕು ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕ ವಿವಿದ್ದೋದ್ದೇಶ ಸಹಕಾರ ಸಂಘ ನಿಯಮಿತ ನವೀಕೃತ ಕಟ್ಟಡವನ್ನು ಬುಧವಾರ ಉದ್ಘಾಟಿಸಲಾಯಿತು.

ಸಂಘದ ಅಧ್ಯಕ್ಷ ಪಿ.ಮಂಜುನಾಥ ಮಾತನಾಡಿ, ಸಂಘದಿಂದ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಬುಟ್ಟಿ ಅಣೆಯುವುದು, ಏಣಿ ಮಾಡುವುದು ಸೇರಿದಂತೆ ವಿವಿಧ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಸಂಘ ಕ್ರಿಯಾ ಯೋಜನೆ ರೂಪಿಸಿದೆ. ಸಂಘದ ಸದಸ್ಯರು 400 ಮಂದಿ ಇದ್ದು, ಮುಂದಿನ ದಿನಗಳಲ್ಲಿ ಸಂಘದ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಸಂಘದಿಂದ ವಾಣಿಜ್ಯ ಮಳಿಗೆ ಸುಸಜ್ಜಿತವಾಗಿ ನಿರ್ಮಿಸಲು ಕ್ರಿಯಾ ಯೋಜನೆ ರೂಪಿಸಿದೆ. ವಿವಿಧ ಅನುದಾನ ಸದುಪಯೋಗ ಪಡಿಸಿಕೊಂಡು ವಾಣಿಜ್ಯ ಮಳಿಗೆ ನಿರ್ಮಿಸಲು ಕ್ರಮ ವಹಿಸಲಾಗುವುದು. ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕಾ ಸಹಕಾರ ಸಂಘವು ಕಳೆದ ಐದು ದಶಕಗಳಿಂದ ನಡೆಯುತ್ತಿದೆ. ಸಹಕಾರ ಸಂಘಗಳು ಸಮಾಜಕ್ಕೆ ಕೊಡುಗೆ ನೀಡಬೇಕು. ಈ ನಿಟ್ಟಿನಲ್ಲಿ ಗುಡಿಕೈಗಾರಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ADVERTISEMENT

ಸಂಘದ ಉಪಾಧ್ಯಕ್ಷ ಎಂ.ಶಂಕರ್‌, ನಿರ್ದೇಶಕರಾದ ವೆಂಕಟೇಶ್‌, ಗೋಪಾಲಕೃಷ್ಣ, ಮುನಿರಾಜು, ಶ್ರೀನಿವಾಸ್‌, ಸುಬ್ರಮಣಿ, ವಿಜಯಕುಮಾರ್‌, ಪ್ರೇಮ, ಶ್ರೀನಿವಾಸ್, ಕೀರ್ತಿಪ್ರಸಾದ್, ಶಿವರಾಮ್‌, ಸರಸ್ವತಮ್ಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶ್ರೀನಿವಾಸ್‌, ಮುಖಂಡರಾದ ಬಿ.ನಾಗರಾಜು, ಮಧು.ಎಸ್‌.ಮೂರ್ತಿ, ನರೇಂದ್ರ ಕುಮಾರ್, ಉಮೇಶ್‌, ಅಶ್ವಥ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.