ಆನೇಕಲ್: ತಾಲ್ಲೂಕಿನ ಸರ್ಜಾಪುರ ಹೋಬಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಹೋರಾಟ ಸಮಿತಿಯಿಂದ ಶುಕ್ರವಾರ ಬೈಕ್ ರ್‍ಯಾಲಿ ನಡೆಯಿತು.
ಕೊಮ್ಮಸಂದ್ರ ಬಯಲು ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ರ್‍ಯಾಲಿ ಆರಂಭಿಸಿದ ರೈತರು ಬೆಂಗಳೂರಿನ ಫ್ರೀಡಂಪಾರ್ಕ್‌ವರೆಗೂ ಬೈಕ್, ಕಾರು, ಬಸ್‌ಗಳಲ್ಲಿ ತೆರಳಿ ಬೃಹತ್ ಪ್ರತಿಭಟನೆ ನಡೆಸಿದರು. ಶಾಸಕ ಬಿ.ಶಿವಣ್ಣ, ವಿಧಾನ ಪರಿಷತ್ ಸದಸ್ಯ ಗೋಪಿನಾಥರೆಡ್ಡಿ, ಬಮುಲ್ ನಿರ್ದೇಶಕ ಆರ್.ಕೆ.ರಮೇಶ್ ಸೇರಿದಂತೆ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮಹಿಳಾ ರೈತರಿಂದ ಪಂಜಿನ ಮೆರವಣಿಗೆ: ಭೂಸ್ವಾಧೀನ ವಿರೋಧಿಸಿ ಮತ್ತು ರೈತರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ತಾಲ್ಲೂಕಿನ ಹಂದೇನಹಳ್ಳಿಯಲ್ಲಿ ಮಹಿಳೆಯರು ಪಂಜಿನ ಮೆರವಣಿಗೆ ನಡೆಸಿ ಜಾಗೃತಿ ಮೂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.