ADVERTISEMENT

ಲಾಂಡ್ರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 20:03 IST
Last Updated 7 ಜನವರಿ 2026, 20:03 IST
   

ಆನೇಕಲ್: ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಶಾಂತಿಪುರದಲ್ಲಿ ಲಾಂಡ್ರಿ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಆಕಸ್ಮಿಕ ಸಂಭವಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ಸಮೀಪದ ಶಾಂತಿಪುರ ಲಾಂಡ್ರಿ ಅಂಗಡಿಯಲ್ಲಿ ಸಂಜೆ 7:30ಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತುಕೊಂಡಿದೆ. ಅಂಗಡಿಯಲ್ಲಿದ್ದ ಗ್ಯಾಸ್ ಸಿಲೆಂಡರ್‌ಗೆ ಬೆಂಕಿ ತಗಲಿ ಸ್ಫೋಟಗೊಂಡಿದೆ. ಇದರಿಂದಾಗಿ ಅಂಗಡಿಯ ಗೋಡೆಗಳು ಬಿರುಕು ಬಿಟ್ಟಿವೆ. ಸ್ಫೋಟದ ಶಬ್ದಕ್ಕೆ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಅಂಗಡಿಯಲ್ಲಿದ್ದ ವಸ್ತುಗಳು ಜಿಲ್ಲಾ ಪಿಲ್ಲಿಯಾಗಿ ಬಿದ್ದಿವೆ.

ಮೊದಲನೇ ಮಹಡಿಯಲ್ಲಿದ್ಡ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಂಗಡಿಯಲ್ಲಿದ್ದವರು ಹೊರ ಬಂದಿದ್ದರಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಫೋಟದ ರಭಸಕ್ಕೆ ವಸ್ತುಗಳು ರಸ್ತೆಗೆ ಸಿಡಿದಿದ್ದರಿಂದ ರಸ್ತೆಯಲ್ಲಿ ಓಡಾಡುತ್ತಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ADVERTISEMENT

ಸಿಲಿಂಡರ್ ಫೋಟೋಗೊಂದು ಬೆಂಕಿ ಕಾಣಿಸಿಕೊಂಡಿದ್ದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 2 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಪರಪ್ಪನ ಅಗ್ರಹಾರದ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.