ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಭೂತಾನಹಳ್ಳಿಯಲ್ಲಿ ಒತ್ತುವರಿಯಾಗಿದ್ದ ಅಂದಾಜು ₹25ಕೋಟಿ ಮೌಲ್ಯದ ಕಿರು ಅರಣ್ಯ ಪ್ರದೇಶವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.
ಸರ್ವೆ ನಂ.67ರಲ್ಲಿನ ಕಿರು ಅರಣ್ಯ ಪ್ರದೇಶದ ಪೈಕಿ ಐದು ಎಕರೆ ಅರಣ್ಯ ಜಮೀನು ಒತ್ತುವರಿಯಾಗಿತ್ತು. ಬೆಂಗಳೂರು ನಗರ ವಿಭಾಗದ ಅಧಿಕಾರಿಗಳು ಶನಿವಾರ ಕಾರ್ಯಾಚರಣೆ ನಡೆಸಿ ಒತ್ತುವರಿ ತೆರವುಗೊಳಿಸಿದರು. ಕಿರು ಅರಣ್ಯದಲ್ಲಿ ಸಸಿಗಳನ್ನು ನೆಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.