ADVERTISEMENT

ಆನೇಕಲ್ | ಚಿನ್ನದ ಸರ ಕಳವು: ನಾಲ್ವರ ಸೆರೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 2:03 IST
Last Updated 21 ಆಗಸ್ಟ್ 2025, 2:03 IST
ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿನ್ನದ ಸರ ದೋಚಿದ್ದ ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿನ್ನದ ಸರ ದೋಚಿದ್ದ ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ   

ಆನೇಕಲ್:  ಮುಖಕ್ಕೆ ಸ್ಪ್ರೇ ಹಾಕಿ ಚಾಕುವಿನಿಂದ ಹಲ್ಲೆ ನಡೆಸಿ ಚಿನ್ನದ ಸರ ದೋಚಿದ್ದ ನಾಲ್ವರು ಆರೋಪಿಗಳನ್ನು ಆನೇಕಲ್‌ ಪೊಲೀಸರು ಬಂಧಿಸಿ 25ಗ್ರಾಂ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಮುತ್ತೂರು ಗ್ರಾಮದ ಭರತ್‌(29), ಉಚ್ಚನಹಳ್ಳಿಯ ಮಧು(24), ಅರೇಹಳ್ಳಿಯ ಸತೀಶ್‌(25) ಮತ್ತು ಸಂತೋಷ್‌(28) ಬಂಧಿತರು.

ಆಗಸ್ಟ್‌ 2ರಂದು ಪಟ್ಟಣದ ಸಂತೆ ಬೀದಿಯ ಸಮೀಪ ಬೈಕ್‌ನಲ್ಲಿ ಬರುತ್ತಿದ್ದ ಶೇಷಾದ್ರಪ್ಪ ಎಂಬುವವರನ್ನು ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಿ 25 ಗ್ರಾಂನ ಚಿನ್ನರ ಸರ ದೋಚಿದ್ದರು. ಆನೇಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಆನೇಕಲ್‌ ಪೊಲೀಸ್‌ ಇನ್‌ಸ್ಪೆಕ್ಟರ್‌ ತಿಪ್ಪೇಸ್ವಾಮಿ, ಸಬ್‌ಇನ್‌ಸ್ಪೆಕ್ಟರ್‌ ಸಿದ್ದೇಗೌಡ, ಸಿಬ್ಬಂದಿ ಸುರೇಶ್, ವಿಠಲ್‌, ಭಾಸ್ಕರ್‌, ಸತೀಶ್‌ ಅವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.