
ಜಿಗಣಿ(ಆನೇಕಲ್): ಜಿಗಣಿ ಸಮೀಪದ ಹಾರಗದ್ದೆಯ ರಾಜರಾಜೇಶ್ವರಿ ದೇವಾಲಯದ 12ನೇ ವಾರ್ಷಿಕೋತ್ಸವ ಶ್ರದ್ಧಾ, ಭಕ್ತಿಯಿಂದ ನಡೆಯಿತು. ಶುಕ್ರವಾರ ಸಂಜೆ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ಹಾರಗದ್ದೆಯ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು.
ವಾರ್ಷಿಕೋತ್ಸವದ ಪ್ರಯಕ್ತ ಗುರುವಾರದಿಂದಲೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಹಾರಗದ್ದೆ ಗ್ರಾಮದ ಸುತ್ತಮುತ್ತಲಿನ ನೂರಾರು ಮಂದಿ ಮಹಿಳೆಯರು ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದರು. ಮಹಿಳೆಯರು ಬೆಲ್ಲಾದರತಿ ಮತ್ತು ಮಡಿಲಕ್ಕಿ ಸಲ್ಲಿಸಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು.
ಹಾರಗದ್ದೆ ಗ್ರಾಮವು ದೇವಾಲಯಗಳ ಗ್ರಾಮವಾಗಿದೆ. ಒಂದೇ ಗ್ರಾಮದಲ್ಲಿ 20ಕ್ಕೂ ಹೆಚ್ಚು ದೇವಾಲಯಗಳಿವೆ. ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುವುದರಿಂದ ಗ್ರಾಮದಲ್ಲಿ ಒಗ್ಗಟ್ಟು ಮೂಡುತ್ತದೆ. ರಾಜರಾಜೇಶ್ವರಿ ದೇವಾಲಯದಲ್ಲಿ 25 ಚಂಡಿಕಾ ಹೋಮಗಳನ್ನು ಆಯೋಜಿಸಿರುವುದು ವಿಶೇಷವಾಗಿದೆ ಎಂದು ದೇವಾಲಯದ ಧರ್ಮದರ್ಶಿ ಶಿವಕುಮಾರ ಸ್ವಾಮೀಜಿ ತಿಳಿಸಿದರು.
ಹಾರಗದ್ದೆಯ ಎಲ್ಲಾ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಒಗ್ಗಟ್ಟು ಮೂಡಿಸುತ್ತಿದೆ ಎಂದು ನಾಗಸಂದ್ರ ಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.