
ಪ್ರಜಾವಾಣಿ ವಾರ್ತೆ
ಆನೇಕಲ್: ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿ, ಸತತ ಐದು ಗಂಟೆಗಳ ಕಾಲ ಮಾಹಿತಿ ಕಲೆಹಾಕಿದರು.
ಬುಧವಾರ ಸಂಜೆ 4ರ ಸುಮಾರಿಗೆ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಆರಕ್ಕೂ ಹೆಚ್ಚು ಮಂದಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಲಾಖೆಯ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಬುಧವಾರ ರಾತ್ರಿ 10ರವರೆಗೆ ಪರಿಶೀಲನೆ ಮುಂದುವರೆದಿತ್ತು.
ಶಿಕ್ಷಣ ಹಕ್ಕು ಕಾಯ್ದೆ ಹಣ ಮರುಪಾವತಿ, ಪಠ್ಯ ಪುಸ್ತಕ ವಿತರಣೆ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಒಳಗಿದ್ದ ಸಿಬ್ಬಂದಿ ಮೊಬೈಲ್ ಅನ್ನು ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.