
ಆನೇಕಲ್: ತಾಲ್ಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಳ್ಳಪ್ಪಸ್ವಾಮಿ, ಮಠದ ಆವರಣದಲ್ಲಿ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ 15ನೇ ಹಣಕಾಸು ಆಯೋಗದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಮತ್ತು ಅಂಗವಿಕಲರ ವಿಶೇಷ ಗ್ರಾಮಸಭೆ ನಡೆಯಿತು. ಗ್ರಾಮ ಸಭೆಯಲ್ಲಿ 70 ಮಂದಿ ಅಂಗವಿಕಲರಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.
ಅಂಗವಿಲರಿಗೆ ಅನುಕಂಪಕ್ಕೆ ಬದಲಾಗಿ ಅವಕಾಶ ನೀಡಬೇಕು. ಇದರಿಂದ ಅವರು ಸಾಧನೆ ಮಾಡಬಹುದು. ಅಂಗವಿಕಲರು ಕೀಳರಿಮೆ ಇಲ್ಲದೆ ಎಲ್ಲ ರಂಗಗಳಲ್ಲಿಯೂ ಮುಕ್ತವಾಗಿ ಪಾಲ್ಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎಂದು ಮಾಯಸಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷ ನಾರಾಯಣಪ್ಪ ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಅಂಗವಿಕಲರಿಗೆ ಪ್ರತ್ಯೇಕ ಅನುದಾನ ಮತ್ತು ಪ್ರತ್ಯೇಕ ಕಾರ್ಯಕ್ರಮ ರೂಪಿಸಲು ಕ್ರಮ ವಹಿಸಲಾಗುವುದು ಎಂದರು.
‘ವಿಕಲಚೇತನನಾಗಿದ್ದರೂ ಸಮಾಜಕ್ಕೆ ಕೊಡುಗೆ ನೀಡಬೇಕೆಂಬ ಇರಾದೆಯೊಂದಿಗೆ ರಾಜಕೀಯ ಮತ್ತು ಕೃಷಿ ಕ್ಷೇತ್ರದಲ್ಲಿ ತೊಡಗಿದ್ದೇನೆ. ಸ್ವಾವಲಂಭಿ ಜೀವನ ನಡೆಸಬೇಕು. ಸಮಾಜಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಮಾದರಿಯಾಗಬೇಕು ಎಂಬುದು ನನ್ನ ಗುರಿ’ ಎಂದು ಗ್ರಾ.ಪಂ ಅಧ್ಯಕ್ಷ ನಾರಾಯಣಪ್ಪ ತಿಳಿಸಿದರು.
ಸಿಡಿಪಿಒ ಮಹೇಶ್, ಗ್ರಾಮ ಪಂಚಾಯತಿ ಸದಸ್ಯರಾದ ಮಂಚನಹಳ್ಳಿ ಸುಬ್ರಮಣಿ, ಶ್ರೀನಿವಾಸ್, ಹರೀಶ್, ಸರಸ್ವತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜೇತ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.