ADVERTISEMENT

ಆನೇಕಲ್: ಮೇಡಹಳ್ಳಿಯಲ್ಲಿ 24*7 ನೀರು ಸರಬರಾಜಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 3:08 IST
Last Updated 6 ಡಿಸೆಂಬರ್ 2025, 3:08 IST
ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಲಜೀವನ್ ಮಿಷನ್ ಅಡಿಯಲ್ಲಿ 24*7 ನೀರು ಸರಬರಾಜುಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಪ್ಪ ಚಾಲನೆ ನೀಡಿದರು
ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಲಜೀವನ್ ಮಿಷನ್ ಅಡಿಯಲ್ಲಿ 24*7 ನೀರು ಸರಬರಾಜುಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಪ್ಪ ಚಾಲನೆ ನೀಡಿದರು   

ಆನೇಕಲ್: ತಾಲ್ಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಡಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಜಲಜೀವನ್ ಮಿಷನ್ ಅಡಿಯಲ್ಲಿ 24*7 ನೀರು ಸರಬರಾಜುಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಪ್ಪ ಚಾಲನೆ ನೀಡಿದರು.

ಬಳಿಕ ಮಾತನಾಡಿ, ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಪ್ರತಿ ಮನೆಗಳಿಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಾಯಸಂದ್ರ ಗ್ರಾಮ ಪಂಚಾಯಿತಿಯ ಮೇಡಹಳ್ಳಿ ಗ್ರಾಮದಲ್ಲಿ 24*7 ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಾಗಿದೆ. ಮುಂದಿನ 15 ದಿನಗಳೊಳಗಾಗಿ ಮಾಯಸಂದ್ರ ಗ್ರಾಮದಲ್ಲಿಯೂ ಸಹ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿಯೂ ನೀರಿನ ಸಂಪರ್ಕ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಹಿಂದೆ ದಿನದಲ್ಲಿ ಕೆಲವು ಗಂಟೆಗಳು ಮಾತ್ರ ನೀರು ಸೌಲಭ್ಯ ದೊರೆಯುತ್ತಿತ್ತು. ಆದರೆ ಜಲಜೀವನ್ ಮಿಷನ್ ಯೋಜನೆಯಿಂದ ವಾರದ ಏಳು ದಿನಗಳು 24 ಗಂಟೆಯೂ ಸಹ ನೀರಿನ ವ್ಯವಸ್ಥೆ ದೊರೆಯುತ್ತದೆ ಎಂದರು.

ADVERTISEMENT

ಮಾಯಸಂದ್ರ ಗ್ರಾಮ ಪಂಚಾಯತಿಯು ಅತ್ತಿಬೆಲೆ ಮತ್ತು ಆನೇಕಲ್ ಮಧ್ಯ ಭಾಗದಲ್ಲಿದೆ. ಸುಸಜ್ಜಿತ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದ್ದು, ಡಿಸೆಂಬರ್ ಮೂರನೇ ವಾರದಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲಾಗುವುದು ಎಂದು ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಿರಿಯ ಅಭಿಯಂತರ ಮಹದೇವಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ನವೀನಾ ಹರೀಶ್, ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜೇತಾ, ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್‌ ರುಕ್ಕು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.