ADVERTISEMENT

ಆನೇಕಲ್‌| ಕೊಲೆ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು

ಆನೇಕಲ್‌ ಪುರಸಭೆ ಸದಸ್ಯ ರವಿ ಕೊಲೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 15:24 IST
Last Updated 1 ಆಗಸ್ಟ್ 2024, 15:24 IST
   

ಆನೇಕಲ್: ಪುರಸಭೆ ಸದಸ್ಯ ರವಿ ಕೊಲೆ ಪ್ರಕರಣದ ಆರೋಪಿ ಕಾರ್ತಿಕ್‌ ಅಲಿಯಾಸ್‌ ಜೆಕೆ ಕಾಲಿಗೆ ಪೊಲೀಸರು ಬುಧವಾರ ಬೆಳಗ್ಗೆ ಮೈಸೂರಮ್ಮನ ದೊಡ್ಡಿಯ ಬಳಿ ಗುಂಡು ಹೊಡೆದಿದ್ದಾರೆ.

ಜುಲೈ 24ರಂದು ರವಿ ಕೊಲೆಯಾಗಿತ್ತು. ಇಬ್ಬರು ಆರೋಪಿಗಳು ಬೆಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿ
ದ್ದರು. ಪ್ರಕರಣದ ಮತ್ತೊಬ್ಬ ಆರೋಪಿ ಕಾರ್ತಿಕ್‌ ತಲೆಮರೆಯಿಸಿಕೊಂಡಿದ್ದ. ಆರೋಪಿ ಬಂಧನಕ್ಕಾಗಿ ಎರಡು ತಂಡ ರಚಿಸಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.

‘ತಾಲ್ಲೂಕಿನ ಮೈಸೂರಮ್ಮನ ದೊಡ್ಡಿಯಲ್ಲಿ ಆರೋಪಿ ಅಡಗಿರುವ ಮಾಹಿತಿ ಮೇರೆಗೆ ಬುಧವಾರ ಬೆಳಗ್ಗೆ ದಾಳಿ ನಡೆಸಿದಾಗ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ. ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಯಿತು. ಆರೋಪಿಯನ್ನು ಹಿಡಿಯಲು ಹೋದ ಪೊಲೀಸ್‌ ಕಾನ್‌ಸ್ಟೇಬಲ್‌ ಸುರೇಶ್‌ ಮೇಲೆ ಕಾರ್ತಿಕ್‌ ಹಲ್ಲೆ ನಡೆಸಲು ಮುಂದಾದ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಆನೇಕಲ್‌ ಇನ್‌ಸ್ಪೆಕ್ಟರ್‌ ತಿಪ್ಪೇಸ್ವಾಮಿ ಅವರು ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿದರು. ಬಳಿಕ ಆತನನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು.

ಆರೋಪಿ ವಿರುದ್ಧ ಆನೇಕಲ್‌, ಅತ್ತಿಬೆಲೆ, ಕುಂಬಳಗೋಡು, ಬನ್ನೇರುಘಟ್ಟ ಸೇರಿದಂತೆ ವಿವಿಧ ಪೊಲೀಸ್‌ ಠಾಣೆಯಲ್ಲಿ 13 ಪ್ರಕರಣ ದಾಖಲಾಗಿವೆ. ಆತನ ವಿರುದ್ಧ ಈ ಎಲ್ಲಾ ಠಾಣೆಗಳಲ್ಲಿಯೂ ರೌಡಿಶೀಟರ್‌ ತೆರೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎಎಎಸ್‌ಪಿ ನಾಗರಾಜು, ಡಿವೈಎಸ್‌ಪಿ ಮೋಹನ್‌ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.