ADVERTISEMENT

ಆನೇಕಲ್ ನಾಯನಹಳ್ಳಿ: ನೀರು ಸರಬರಾಜಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 2:20 IST
Last Updated 26 ಫೆಬ್ರುವರಿ 2026, 2:20 IST
ಆನೇಕಲ್ ತಾಲ್ಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿಯು ಪೂರ್ಣಗೊಂಡು ನೀರು ಸರಬರಾಜಿಗೆ ಚಾಲನೆ ನೀಡಲಾಯಿತು
ಆನೇಕಲ್ ತಾಲ್ಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿಯು ಪೂರ್ಣಗೊಂಡು ನೀರು ಸರಬರಾಜಿಗೆ ಚಾಲನೆ ನೀಡಲಾಯಿತು   

ಆನೇಕಲ್: ತಾಲ್ಲೂಕಿನ ಹಾರಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್‌ ಕಾಮಗಾರಿಯು ಪೂರ್ಣಗೊಂಡು 24x7 ನೀರು ಸರಬರಾಜಿಗೆ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಎಂಜಿನಿಯರ್‌ ಮಹದೇವಪ್ಪ ಚಾಲನೆ ನೀಡಿದರು.

ಗ್ರಾಮದ ಮುಖಂಡರಾದ ಆಶಾ ಮುನಿರಾಜುಗೌಡ ಮಾತನಾಡಿ, ಮಹಿಳೆಯರು ನೀರಿಗಾಗಿ ಪರದಾಡಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಕಾಮಗಾರಿಯಿಂದಾಗಿ ಮನೆ ಬಾಗಿಲಿಗೆ ನೀರು ದೊರೆಯುವಂತಾಗಿದೆ. ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಪೈಪ್‌ಲೈನ್‌ ಮತ್ತು ಜಲಸಂಗ್ರಹಗಾರಗಳನ್ನು ಸ್ಥಾಪಿಸಿರುವುದರಿಂದ 24x7 ನೀರು ದೊರೆಯುತ್ತದೆ. ಇದರಿಂದಾಗಿ ಮಹಿಳೆಯರಿಗೆ ಹೆಚ್ಚು ಉಪಯೋಗವಾಗುತ್ತದೆ. ಮಹಿಳೆಯರು ನೀರಿಗಾಗಿ ಅರ್ಧ ಕಿ.ಮೀಗೂ ಹೆಚ್ಚು ನಡೆದುಕೊಂಡು ಹೋಗಬೇಕಾಗಿತ್ತು. ಕಾರ್ಯಕ್ರಮದಿಂದಾಗಿ ಮನೆಯ ಸಮೀಪದಲ್ಲಿಯೇ ನೀರು ದೊರೆಯುಂತಾಗಿದೆ ಎಂದರು.

ಎಂಜಿನಿಯರ್‌ ಮಹದೇವಪ್ಪ ಮಾತನಾಡಿ, ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿಯೂ ಜಲಜೀವನ್‌ ಮಿಷನ್‌ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಮಾಯಸಂದ್ರ, ಮರಸೂರು, ಹಾರಗದ್ದೆ ಗ್ರಾ.ಪಂ ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಚಾಲನೆ ನೀಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿಯೂ ಮಹಿಳೆಯರು ಗಂಗೆ ಪೂಜೆ ಮಾಡಿ ಕೊಳಾಯಿಗಳಿಗೆ ಪೂಜೆ ಸಲ್ಲಿಸಿ ಸಂಭ್ರಮ ಆಚರಿಸುತ್ತಿದ್ದಾರೆ ಎಂದರು.

ADVERTISEMENT

ಜಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿರಾಜು, ಮುಖಂಡ ವೆಂಕಟೇಶ್‌, ಸುರೇಶ್‌, ನವೀನ್‌, ಪಚ್ಚಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.