ಆನೇಕಲ್ : ತಾಲ್ಲೂಕಿನ ಎಲೆಕ್ಟ್ರಾನಿಕ್ಸಿಟಿಯ ಎನ್‌ಟಿಟಿಎಫ್ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಿಂದ ಉದ್ಯೋಗ ಅವಕಾಶ ದೊರೆತ್ತಿದ್ದು, ಉದ್ಯೋಗ ಪ್ರಮಾಣಪತ್ರವನ್ನು ಶನಿವಾರ ವಿತರಿಸಲಾಯಿತು.
ಎನ್‌ಟಿಟಿಎಫ್ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ತರಬೇತಿ ನೀಡಲಾಗುತ್ತಿದೆ. ಉದ್ಯೋಗ ಅವಕಾಶ ಕಲ್ಪಿಸಲು ಪ್ರಯತ್ನಿಸಲಾಗಿದೆ. ಸುಮಾರು 30 ಕಂಪನಿಗಳು ಸಂದರ್ಶನ ನಡೆಸಿ ಅರ್ಹತೆ ಹೊಂದಿದ 200 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿವೆ ಎಂದು ಎನ್‌ಟಿಟಿಎಫ್ ವ್ಯವಸ್ಥಾಪಕ ನಿರ್ದೇಶಕ ರವಿ ಟೆನ್ನಿಟಿ, ಪ್ರಾಂಶುಪಾಲ ಸತೀಶ್ ಜೋಶಿ ತಿಳಿಸಿದರು.
ಕೇಶವರಾಜು, ಕೋನಪ್ಪನ ಅಗ್ರಹಾರ ಪಂಚಾಯಿತಿ ಸದಸ್ಯ ಶೋಗನ್ ಮಂಜು, ಎನ್‌ಟಿಟಿಎಫ್ ಆಡಳಿತ ಮಂಡಳಿಯ ನಾಗೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.