ADVERTISEMENT

ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2020, 4:04 IST
Last Updated 29 ಅಕ್ಟೋಬರ್ 2020, 4:04 IST

ಆನೇಕಲ್: ಆನೇಕಲ್‌ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಯಾಗಿದೆ.

2019ರ ಮೇ ತಿಂಗಳಿನಲ್ಲಿ ಪುರಸಭೆ ಚುನಾವಣೆ ನಡೆದಿತ್ತು. ಒಂದೂವರೆ ವರ್ಷ ಕಳೆದರೂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿವಿಧ ಕಾರಣಗಳಿಂದ ಮುಂದೂಡಿತ್ತು. ಒಟ್ಟು 27 ಸದಸ್ಯ ಬಲದ ಪುರಸಭೆಯಲ್ಲಿ ಕಾಂಗ್ರೆಸ್‌ 17 ಮತ್ತು ಬಿಜೆಪಿಯ 10 ಸದಸ್ಯರಿದ್ದಾರೆ. ಕಾಂಗ್ರೆಸ್‌ ಅಧಿಕಾರ ಗದ್ದುಗೆರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT