ಆನೇಕಲ್: ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡಾಪುರ ಗ್ರಾಮದಿಂದ ಮಾಯಸಂದ್ರ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಭಾರಿ ಮಳೆಯಿಂದ ಭತ್ತ ನಾಟಿ ಮಾಡುವ ಗದ್ದೆಯಂತೆ ಬದಲಾಗಿದೆ. ಕೆಸರುಗದ್ದೆಯಾಗಿರುವ ರಸ್ತೆಯಲ್ಲಿ ವಾಹನ ಸವಾರರು ಪ್ರಯಾಣಿಸಲು ಸರ್ಕಸ್ ಮಾಡಬೇಕಿದೆ.
ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರು ಹರಸಾಹಸ ಪಡಬೇಕಾಗಿದೆ. ರಸ್ತೆಯ ಪಕ್ಕದಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಪ್ರತಿದಿನ ಹಲವಾರು ವಾಹನಗಳು ಓಡಾಡುತ್ತವೆ. ಮಳೆಯಿಂದ ಹದಗೆಟ್ಟಿರುವ ರಸ್ತೆಯಲ್ಲಿ ಸುಗಮವಾಗಿ ಸಂಚರಿಸಲು ಅನುವು ಮಾಡಿಕೊಡಬೇಕು ಎಂಬುದು ಸ್ಥಳೀಯರ ಬೇಡಿಕೆ.
ಕಳೆದ ಒಂದು ವಾರದಿಂದ ತಾಲ್ಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಬುಧವಾರ ಸಹ ಮೋಡ ಮುಸುಕಿದ ವಾತಾವರಣದಿಂದ ಕೂಡಿತು. ಆಗ್ಗಾಗೆ ತುಂತುರು ಮಳೆಯಿಂದ ಬೀಳುತ್ತಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.