ಆನೇಕಲ್ : ತಾಲ್ಲೂಕಿನ ನೆರಳೂರು ಗ್ರಾಮದಲ್ಲಿ ಕಾಶಿ ವಿಶ್ವನಾಥೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಸುತ್ತಮುತ್ತಲಿನ ಗ್ರಾಮಗಳ ಭಕ್ತರು ವೈಭವದ ಜಾತ್ರ ಮಹೋತ್ಸವದಲ್ಲಿ ಭಾಗಿಗಳಾಗಿದ್ದರು.
ರಥೋತ್ಸವದ ಪ್ರಯುಕ್ತ ಕಾಶಿ ವಿಶ್ವನಾಥೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಿಳೆಯರು ದೀಪಾರತಿಗಳನ್ನು ಹೊತ್ತು ಸ್ವಾಮಿಗೆ ಸಮರ್ಪಿಸಿದರು. ಭಕ್ತರ ದವನ ಚುಚ್ಚಿದ ಬಾಳೆಹಣ್ಣನ್ನು ರಥಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು. ಬಿಸಿಲಿನ ಬೇಗೆಯನ್ನು ತಣಿಸಲು ಅರವಂಟಿಕೆಗಳನ್ನು ಸ್ಥಾಪಿಸಿ ನೀರು ಮಜ್ಜಿಗೆ ಪಾನಕ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.