ಬಂಧನ
ಆನೇಕಲ್: ಅಪಾರ್ಟ್‌ಮೆಂಟ್‌ಗಳಲ್ಲಿ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಅಂದಾಜು ₹64.46 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ಹೆಬ್ಬಗೋಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ನಿತೇಶ್ ಸುಬ್ಬು (26) ಬಂಧಿತ ಆರೋಪಿ. ಆತನಿಂದ 640 ಗ್ರಾಂ ಚಿನ್ನ, ವಜ್ರ, ಬೆಳ್ಳಿಯ ಆಭರಣ ಸೇರಿದಂತೆ ಅಂದಾಜು ₹64.46 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯು ಹೆಬ್ಬಗೋಡಿ ಸಮೀಪದ ಅಪಾರ್ಟ್‌ಮೆಂಟ್‌ವೊಂದರಲ್ಲಿ ತನ್ನ ಅಕ್ಕನ ಜೊತೆ ವಾಸವಿದ್ದ. ಅಪಾರ್ಟ್‌ಮೆಂಟ್‌ಗಳಲ್ಲಿ ಬೀಗ ಹಾಕಿರುವ ಮನೆಗಳನ್ನು ಹುಡುಕಿ ಕಳ್ಳತನ ಮಾಡುತ್ತಿದ್ದ.
ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಜಿಎಂ ಇನ್‌ಫಿನಿಟ್ ಅಪಾರ್ಟ್‌ಮೆಂಟ್‌ನಲ್ಲಿ ಮೂರು ಮನೆಗಳನ್ನು ಕಳವು ಮಾಡಿ ಚಿನ್ನಾಭರಣ ನಗದು ದೋಚಿದ್ದ.
ಡೆಹ್ರಾಡೂನ್‌ನಲ್ಲಿ ಪ್ರಾಧ್ಯಾಪಕರಾಗಿರುವ ಸುರೇಶ್ ಅಯ್ಯರ್ ಅವರ ಮನೆಯಲ್ಲಿ ಕಳ್ಳತನವಾಗಿತ್ತು. ಇವರು ನೀಡಿದ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.