ADVERTISEMENT

ಆನೇಕಲ್– ಅಂತರ ರಾಜ್ಯ ಕಳ್ಳರ ಬಂಧನ: ಆಭರಣಗಳ ವಶ

​ಪ್ರಜಾವಾಣಿ ವಾರ್ತೆ
Published 30 ಮೇ 2023, 7:29 IST
Last Updated 30 ಮೇ 2023, 7:29 IST
ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪೊಲೀಸರು ಅಂತರ ರಾಜ್ಯ ಕಳ್ಳರಿಂದ ವಶಪಡಿಸಿಕೊಂಡಿರುವ ಆಭರಣಗಳು
ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪೊಲೀಸರು ಅಂತರ ರಾಜ್ಯ ಕಳ್ಳರಿಂದ ವಶಪಡಿಸಿಕೊಂಡಿರುವ ಆಭರಣಗಳು   

ಆನೇಕಲ್ : ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ದೋಚಿದ್ದ ಇಬ್ಬರು ಅಂತರ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿ 155 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ ಮತ್ತು ನಗದು ಸೇರಿದಂತೆ ಒಟ್ಟು ₹ 9.75ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ತಮಿಳುನಾಡು ಮೂಲದ ಸರವಣ (39) ಮತ್ತು ದಿನೇಶ್‌(33) ಎಂದು ಗುರುತಿಸಲಾಗಿದೆ. ವಿಧಾನಸಭಾ ಚುನಾವಣೆ ದಿನದಂದು ಮತದಾನ ಮಾಡಲು ಹೋಗಿದ್ದಾಗ ಹಾಡಹಗಲೇ ಹರೀಶ್‌ ಎಂಬುವರ ಮನೆಯಲ್ಲಿ ಕಳವು ನಡೆದಿತ್ತು.

ಮನೆ ಮಾಲೀಕ ಹರೀಶ್‌ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ ನೆರೆಮನೆ ವಾಸಿ ದಿನೇಶ್‌ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ದಿನೇಶ್‌ ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢಪಟ್ಟಿದೆ.

ADVERTISEMENT

ಆರೋಪಿಗಳನ್ನು ಬಂಧಿಸಿ ಒಟ್ಟು ₹9.75 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಬ್ಬಗೋಡಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಐಯನ್‌ ರೆಡ್ಡಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.