
ಪ್ರಜಾವಾಣಿ ವಾರ್ತೆಸಾವು (ಸಾಂದರ್ಭಿಕ ಚಿತ್ರ)
ಗೆಟ್ಟಿ ಚಿತ್ರ
ಆನೇಕಲ್: ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾರಗದ್ದೆ ಬಳಿ ಬುಧವಾರ ರಾತ್ರಿ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ದಂಪತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಮಿಳುನಾಡಿನ ಸೆಲ್ವರಾಜ್(40), ನಿತ್ಯಾ(37) ಮೃತರು.
ಕೆಲಸ ಮುಗಿಸಿ ಸೀತಾನಾಯನಹಳ್ಳಿಯಲ್ಲಿದ್ದ ಮನೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದರಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಾ ರಕ್ತವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.