ಆನೇಕಲ್: ತಾಲ್ಲೂಕಿನ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾರಗದ್ದೆ ವಿಎಸ್‌ಎಸ್‌ಎನ್ ಬ್ಯಾಂಕ್‌ನ ವ್ಯವಸ್ಥಾಪಕರೊಬ್ಬರು ಬುಧವಾರ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಪ್ರಕಾಶ್ ಎಂದು ಗುರುತಿಸಲಾಗಿದೆ. ಹಾರಗದ್ದೆ ವಿಎಸ್‌ಎಸ್‌ಎನ್‌ನಲ್ಲಿ ಪ್ರಕಾಶ್ ಹಲವು ವರ್ಷಗಳಿಂದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬ್ಯಾಂಕ್‌ನ ಸದಸ್ಯರು ಸೇರಿದಂತೆ ಕೆಲ ಪ್ರಭಾವಿಗಳು ಬೆದರಿಸಿ ಹಣ ಪಡೆದಿದ್ದ ಕಾರಣಕ್ಕೆ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪ್ರಕಾಶ್, ತಮ್ಮಿಂದ ಹಣ ಪಡೆದಿರುವವರ ವಿವರ ಮತ್ತು ಮೊತ್ತವನ್ನು ಮರಣಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಬುಧವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಿಗಣಿ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಡೆತ್‌ನೋಟ್‌ನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.