
ಸಂಗ್ರಹ ಚಿತ್ರ
ದೊಡ್ಡಬಳ್ಳಾಪುರ: ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.1 ರಿಂದ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷೆ ನಳಿನಾಕ್ಷಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಸಚಿವರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು. ಇದಲ್ಲದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಧರಣಿಯಲ್ಲಿ ರಾಜ್ಯದ ಎಲ್ಲಾ ಅಂಗನವಾಡಿ ನೌಕರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬೇಡಿಕೆಗಳು: ಐಸಿಡಿಸಿ ಯೋಜನೆಯ ಸುವರ್ಣ ಮಹೋತ್ಸವನ್ನು ಕೆಂದ್ರ ಸರ್ಕಾರ ಆಚರಿಸಬೇಕು. ಐಸಿಡಿಸಿ ಯೋಜನೆಯನ್ನು ಕಾಯಂ ಮಾಡಬೇಕು, ಕಾಯಂ ಮಾಡುವ ತನಕ ಪ್ರತ್ಯೇಕ ನಿರ್ದೇಶನಾಲಯ ರಚಿಸಬೇಕು. ಅಂಗನವಾಡಿಗಳ ಘಟಕ ವೆಚ್ಚ ಹೆಚ್ಚಳವನ್ನು ಕೂಡಲೇ ಮಾಡಬೇಕು ಮತ್ತು ಸ್ಥಳೀಯ ಆಹಾರ ಪದಾರ್ಥಗಳನ್ನು ನೀಡಬೇಕು.
2018 ರಿಂದ ಅಂಗನವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ. ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ ₹2,700, ಸಹಾಯಕಿಗೆ ₹1,350 ಮಾತ್ರವೇ ನೀಡುತ್ತಿದೆ. ಕನಿಷ್ಠ ವೇತನವನ್ನಾದರೂ ಜಾರಿ ಮಾಡಬೇಕು. ಎಫ್‌ಆರ್‌ಎಸ್ ರದ್ದು ಮಾಡಬೇಕು. ಇಲ್ಲದಿದ್ದಲ್ಲಿ 6 ತಿಂಗಳಿಗೊಮ್ಮೆ ಎಫ್.ಆರ್.ಎಸ್ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವೈಪೈ ವ್ಯವಸ್ಥೆ ನೀಡಬೇಕು. ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಂದ ಬಿಡುಗಡೆಗೊಳಿಸಬೇಕು. ಅಂಗನವಾಡಿ ನೌಕರರನ್ನು 3 ಮತ್ತು 4ನೇ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.