ADVERTISEMENT

ದೊಡ್ಡಬಳ್ಳಾಪುರ: ಸಾಯಿಬಾಬಾ ದೇವಾಲಯದ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2021, 4:12 IST
Last Updated 5 ನವೆಂಬರ್ 2021, 4:12 IST
ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಬೆಸೆಂಟ್‌ಪಾರ್ಕ್ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು
ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಬೆಸೆಂಟ್‌ಪಾರ್ಕ್ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು   

ದೊಡ್ಡಬಳ್ಳಾಪುರ:ನಗರದ ರೈಲ್ವೆ ನಿಲ್ದಾಣದ ಬೆಸೆಂಟ್‌ ಪಾರ್ಕ್ ರಸ್ತೆಯ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಶಿರಡಿ ಸಾಯಿಬಾಬಾ ಸೇವಾ ಟ್ರಸ್ಟ್ ವತಿಯಿಂದ 9ನೇ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.

ಬೆಳಿಗ್ಗೆ ನಡೆದ ಕಾಕಡಾರತಿ, ಪನ್ನೀರು ಅಭಿಷೇಕದಲ್ಲಿ ಭಕ್ತಾದಿಗಳು ಪನ್ನೀರು ಅಭಿಷೇಕ ನೆರವೇರಿಸಿದರು. ನಂತರ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಪೂಜೆ ಹಾಗೂ ಭಜನೆ ಆರತಿ ದೂಪ ಪೂಜಾ ಕಾರ್ಯಕ್ರಮಗಳು ನಡೆದವು.

ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಸಂಜೆ ಸಾಯಿ ಭಜನಾ ಮಂಡಳಿಯಿಂದ ಭಜನೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.