ದೇವನಹಳ್ಳಿ: ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಇಂಧನ ಸಚಿವ ಕೆ.ಜೆ ಜಾರ್ಜ್ ಅವರಿಗೆ ಶುಕ್ರವಾರ ಮನವಿ ಮಾಡಿದರು.
ಹೊಸಕೋಟೆ ನಗರದಲ್ಲಿ 400/200 ಕೆ.ವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ, ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ 220 ಕೆ.ವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ, ತಾತನೂರು, ಬಾನಹಳ್ಳಿ, ತಮ್ಮರಸನಹಳ್ಳಿ, ಎಂ ಸತ್ಯವಾರ, ಅಟ್ಟೂರಿನಲ್ಲಿ 66 ಕೆ.ವಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿದರು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ(ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಂಗಳೂರು ವಿದ್ಯುತ್ ಪ್ರಸರಣ ನಿಗಮದ(ಬೆಸ್ಕಾಂ)ವ್ಯವಸ್ಥಾಪಕ ನಿರ್ದೇಶಕ ಎನ್.ಶಿವಶಂಕರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.