ADVERTISEMENT

ಬೀದಿ ದೀಪಗಳ ದುರಸ್ತಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2019, 13:54 IST
Last Updated 28 ಡಿಸೆಂಬರ್ 2019, 13:54 IST
ಬೀದಿ ದೀಪಗಳನ್ನು ದುರಸ್ಥಿಗೊಳಿಸುವಂತೆ ಬಿಡದಿ ಪುರಸಭೆ ಆಡಳಿತಾಧಿಕಾರಿ ಆಗಿರುವ ಉಪವಿಭಾಗಾಧಿಕಾರಿ ಕೆ.ದಾಕ್ಷಾಯಿಣಿ ಅವರಿಗೆ ಸದಸ್ಯ ಸಿ.ಉಮೇಶ್ ಮನವಿ ಸಲ್ಲಿಸಿದರು.
ಬೀದಿ ದೀಪಗಳನ್ನು ದುರಸ್ಥಿಗೊಳಿಸುವಂತೆ ಬಿಡದಿ ಪುರಸಭೆ ಆಡಳಿತಾಧಿಕಾರಿ ಆಗಿರುವ ಉಪವಿಭಾಗಾಧಿಕಾರಿ ಕೆ.ದಾಕ್ಷಾಯಿಣಿ ಅವರಿಗೆ ಸದಸ್ಯ ಸಿ.ಉಮೇಶ್ ಮನವಿ ಸಲ್ಲಿಸಿದರು.   

ಬಿಡದಿ: ಪುರಸಭೆ ವ್ಯಾಪ್ರಿಯಲ್ಲಿ ಹಾಳಾಗಿರುವ ಬೀದಿ ದೀಪಗಳ ದುರಸ್ತಿಗೆ ಒತ್ತಾಯಿಸಿ ಹಾಗೂ ಪುರಸಭೆ ಆಡಳಿತಕ್ಕೆ ಚುರುಕು ನೀಡುವಂತೆ ಆಗ್ರಹಿಸಿ ಸದಸ್ಯ ಸಿ.ಉಮೇಶ್ ಅವರು ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ನಗರದ ಮಿನಿವಿಧಾನಸೌಧದಲ್ಲಿರುವ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪುರಸಭೆ ಆಡಳಿತಾಧಿಕಾರಿಯೂ ಆದ ುಪ ವಿಭಾಗಾಧಿಕಾರಿ ಕೆ.ದಾಕ್ಷಾಯಿಣಿ ಅವರಿಗೆ ಮನವಿ ಸಲ್ಲಿಸಿದರು.

ಬಳಿಕ ಸಿ.ಉಮೇಶ್ ಮಾತನಾಡಿ, ‘ಪುರಸಭೆಯಲ್ಲಿ ಯಾವ ಕೆಲಸವೂ ಆಗುತ್ತಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ಅಕ್ರಮ ಖಾತೆಗಳನ್ನು ಮಾಡುತ್ತಿದ್ದಾರೆ. ಸಾರ್ವಜನಿಕರ ಸಮಸ್ಯೆಗಳ ಮನವಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ. ವಾರ್ಡ್‌ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಮುಖ್ಯಾಧಿಕಾರಿಗೆ ಮನವಿ ಕೊಟ್ಟರೆ ಸ್ಪಂದಿಸುವುದಿಲ್ಲ. ಚುನಾಯಿತ ಪ್ರತಿನಿಧಿಗಳಿಗೆ ಗೌರವ ನೀಡುತ್ತಿಲ್ಲ. ಮತದಾರರಿಗೆ ನಾವು ಉತ್ತರ ಕೊಡಲಾಗುತ್ತಿಲ್ಲ’ ಆರೋಪ ಮಾಡಿದರು.

ADVERTISEMENT

ಬಿಡದಿ ಪುರಸಭೆ 11 ನೇ ವಾರ್ಡ್ ವ್ಯಾಪ್ತಿಯ ಪೊಲೀಸ್ ವಸತಿಗೃಹ ಪ್ರದೇಶದಲ್ಲಿ ಎರಡು ತಿಂಗಳುಗಳಿಂದ ಹಾಳಾಗಿರುವ ಬೀದಿ ದೀಪಗಳನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳುವಂತೆ ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಮುಖ್ಯಾಧಿಕಾರಿ ಇಲ್ಲದ ಸಬೂಬುಗಳನ್ನು ಹೇಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಸ್ಯೆ ಆಲಿಸಿದ ಉಪವಿಭಾಗಾಧಿಕಾರಿ, ಬಿಡದಿ ಪುರಸಭೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಕೂಡಲೇ ಕೆಟ್ಟುನಿಂತಿರುವ ಬೀದಿ ದೀಪಗಳನ್ನು ಸರಿಪಡಿಸಲು ಸೂಚಿಸಿದರು. ಶೀಘ್ರವೇ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳ ಪರಿಶೀಲಿಸಿ ದೊರಕಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.