ದೊಡ್ಡಬಳ್ಳಾಪುರ: ನಗರ ಹಾಗೂ ಹೊರವಲಯದ ಶಾಲಾ, ಕಾಲೇಜು ವ್ಯಾಪ್ತಿಯಲ್ಲಿ ಹೆಚ್ಚಾಗಿರುವ ಪುಂಡರ ಬೈಕ್ ವ್ಹೀಲಿ ಹಾವಳಿಗೆ ಕಡಿವಾಣ ಹಾಕುವಂತೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಪದಾಧಿಕಾರಿಗಳು ನಗರ ಮತ್ತು ಗ್ರಾಮಾಂತರ ಠಾಣೆ ಪೊಲೀಸರಿಗೆ ಮನವಿ ಸಲ್ಲಿಸಿದರು.
ಈ ಕುರಿತು ಮಾಹಿತಿ ನೀಡಿದ ಮುಖಂಡರು ನಗರದ ಪ್ರೌಢಶಾಲೆ, ಪಿಯು ಕಾಲೇಜು ಬಳಿ ಪುಂಡರ ಹಾವಳಿ ಹೆಚ್ಚಾಗಿದೆ. ಬೈಕ್ ವ್ಹೀಲಿ ಮಾಡುತ್ತಾ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದು ಹೆಚ್ಚಾಗಿದೆ. ಹೆಣ್ಣು ಮಕ್ಕಳು ಈ ಕಿರುಕುಳ ಹೇಳಿಕೊಳ್ಳಲು ಮುಜುಗರ ಪಡುತ್ತಿದ್ದಾರೆ. ಶಾಲಾ, ಕಾಲೇಜು ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಗಸ್ತು ತಿರುಗುವ ವ್ಯವಸ್ಥೆಯಾಗಬೇಕು ಎಂದರು.
ವೇದಿಕೆ ಮಹಿಳಾ ಘಟಕದ ಪದಾಧಿಕಾರಿಗಳಾದ ಕುಮುದಾ, ಶಶಿಕಲಾ, ರೇಷ್ಮಾಖಾನಂ, ಪದ್ಮ,ರಾಗಿಣಿ,ನಾಗರತ್ನಮ್ಮ,ನಾಗವೇಣಿ, ಮುಖಂಡರಾದ ಪ್ರವೀಣ್, ಮಂಜುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.