ADVERTISEMENT

ದೊಡ್ಡಬಳ್ಳಾಪುರ ನಗರಸಭೆಯ 20 ಎಕರೆ ಜಮೀನು ರಕ್ಷಣೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 2:20 IST
Last Updated 17 ಜುಲೈ 2025, 2:20 IST
ದೊಡ್ಡಬಳ್ಳಾಪುರ ನಗರಸಭೆಗೆ ಸೇರಿರುವ ಸರ್ವೇ ನಂಬರ್‌ 112 ರಲ್ಲಿನ 20 ಎಕರೆ ಸ್ವತ್ತನ್ನು ರಕ್ಷಿಸಿಕೊಳ್ಳುವಂತೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬುಧವಾರ ನಗರಸಭೆ ಪೌರಾಯುಕ್ತ ಕಾರ್ತೀಕ್ ಈಶ್ವರ್ ಅವರಿಗೆ ಮನವಿ ಸಲ್ಲಿಕೆ
ದೊಡ್ಡಬಳ್ಳಾಪುರ ನಗರಸಭೆಗೆ ಸೇರಿರುವ ಸರ್ವೇ ನಂಬರ್‌ 112 ರಲ್ಲಿನ 20 ಎಕರೆ ಸ್ವತ್ತನ್ನು ರಕ್ಷಿಸಿಕೊಳ್ಳುವಂತೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬುಧವಾರ ನಗರಸಭೆ ಪೌರಾಯುಕ್ತ ಕಾರ್ತೀಕ್ ಈಶ್ವರ್ ಅವರಿಗೆ ಮನವಿ ಸಲ್ಲಿಕೆ   

ದೊಡ್ಡಬಳ್ಳಾಪುರ: ನಗರಸಭೆಗೆ ಸೇರಿದ 20 ಎಕರೆ ಜಮೀನನ್ನು ರಕ್ಷಿಸುವಂತೆ ಒತ್ತಾಯಿಸಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಬುಧವಾರ ನಗರಸಭೆ ಪೌರಾಯುಕ್ತ ಕಾರ್ತೀಕ್ ಈಶ್ವರ್ ಅವರಿಗೆ ಮನವಿ ಸಲ್ಲಿಸಿದೆ.

ನಗರಸಭೆ ಕಾರ್ಯಾಲಯದ ಸಮೀಪದಲ್ಲೇ ಇರುವ 20 ಎಕರೆ ಜಮೀನು ಸರ್ವೇ ಮಾಡಿಸಿ ನಗರಸಭೆಯ ಸುಪರ್ದಿಗೆ ಪಡೆದುಕೊಳ್ಳಬೇಕು ಎಂದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಒತ್ತಾಯಿಸಿದರು.

ವೇದಿಕೆ ತಾಲ್ಲೂಕು ಅಧ್ಯಕ್ಷ ವಿನಯ್ ಆರಾಧ್ಯ, ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್, ಸಂಘಟನ ಕಾರ್ಯದರ್ಶಿ ಶಿವಾನಂದ್,ಸುರೇಶ್,ಪ್ರಶಾಂತ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.