ADVERTISEMENT

ಜಿಲ್ಲಾ ಪ್ರಾಣಿ ಕಲ್ಯಾಣ ಮಂಡಳಿ ರಚನೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 3:16 IST
Last Updated 7 ಜನವರಿ 2021, 3:16 IST
ಪ್ರಾಣಿ ಕಲ್ಯಾಣ ಮಂಡಳಿ ರಚಿಸುವಂತೆ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಡಾ.ವಿ. ಜೀವನ್‌ಕುಮಾರ್ ಅವರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು 
ಪ್ರಾಣಿ ಕಲ್ಯಾಣ ಮಂಡಳಿ ರಚಿಸುವಂತೆ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಡಾ.ವಿ. ಜೀವನ್‌ಕುಮಾರ್ ಅವರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು    

ದೊಡ್ಡಬಳ್ಳಾಪುರ:ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯ ನಿಯಮದಂತೆ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕಿನಲ್ಲಿ ಪ್ರಾಣಿ ಕಲ್ಯಾಣ ಮಂಡಳಿ ರಚನೆ ಮಾಡಬೇಕು. ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಣಿ ಕಲ್ಯಾಣ ಮಂಡಳಿಯನ್ನು ಪೂರ್ಣ ಪ್ರಮಾಣದಲ್ಲಿ ರಚನೆ ಮಾಡಬೇಕು ಎಂದು ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಡಾ.ವಿ. ಜೀವನ್‌ಕುಮಾರ್ ಅವರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿಸಲ್ಲಿಸಿದರು.

ಜಿಲ್ಲೆ ಸೇರಿದಂತೆ ಪ್ರತಿ ತಾಲ್ಲೂಕಿನಲ್ಲಿ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಪ್ರಾಣಿ ಕಲ್ಯಾಣಕ್ಕೆ ಶ್ರಮಿಸುತ್ತಿರುವ ಎನ್‌ಜಿಓಗಳನ್ನು ಒಳಗೊಂಡಂತೆ ಪ್ರಾಣಿ ಕಲ್ಯಾಣ ಮಂಡಳಿಯನ್ನು ರಚನೆ ಮಾಡಬೇಕು. ಈ ಮೂಲಕ ಪ್ರಾಣಿ ರಕ್ಷಣೆಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ನಡೆಸುವಲ್ಲಿ ಮುಂದಾಗಬೇಕಿದೆ ಎಂದು ಮನವಿ ಮಾಡಿದರು.

ಈಗಾಗಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರಾಣಿ ಕಲ್ಯಾಣ ಮಂಡಳಿಗಳು ಪ್ರಮುಖ ಪಾತ್ರ ವಹಿಸಲಿವೆ. ಜಿಲ್ಲೆಯಲ್ಲಿ ಹಲವಾರು ಗೋಶಾಲೆಗಳು ಈ ಸಂಬಂಧಿತ ಕಾರ್ಯ ನಿರ್ವಹಿಸುತ್ತಿರುವ ಎನ್‌ಜಿಓಗಳನ್ನು ಗುರುತಿಸಿ ಮಂಡಳಿಗಳನ್ನು ರಚನೆ ಮಾಡಬೇಕು. ಜಿಲ್ಲಾ ಮಂಡಳಿಯಲ್ಲಿ ಅಧಿಕಾರಿಗಳು ಹಾಗೂ ಪ್ರಾಣಿ ರಕ್ಷಣೆಯಲ್ಲಿ ತೊಡಗಿರುವ ಗೋಶಾಲೆಗಳು, ಎನ್‌ಜಿಓಗಳನ್ನು ಒಳಗೊಂಡ ಸಭೆ ಕರೆದು ಮಂಡಳಿಯನ್ನು ಜಿಲ್ಲೆಯಾದ್ಯಂತ ಪೂರ್ಣಪ್ರಮಾಣದಲ್ಲಿ ರಚನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.