ADVERTISEMENT

ಪ್ರಥಮ ಪಿಯುಸಿ ಪ್ರವೇಶಾತಿ ವಸತಿ ಶಾಲೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2022, 6:27 IST
Last Updated 14 ಏಪ್ರಿಲ್ 2022, 6:27 IST
ಆನೇಕಲ್‌ನ ವಿಧಾತ್ ಶಾಲೆಯಲ್ಲಿ ‘ವಿ ದ ಪೀಪಲ್ ಆಫ್ ಇಂಡಿಯಾ’ ನಾಟಕ ಪ್ರದರ್ಶನ ನಡೆಯಿತು
ಆನೇಕಲ್‌ನ ವಿಧಾತ್ ಶಾಲೆಯಲ್ಲಿ ‘ವಿ ದ ಪೀಪಲ್ ಆಫ್ ಇಂಡಿಯಾ’ ನಾಟಕ ಪ್ರದರ್ಶನ ನಡೆಯಿತು   

ಕುಂದಾಣ (ದೇವನಹಳ್ಳಿ ತಾಲ್ಲೂಕು): ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿಯ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ದೇವನಹಳ್ಳಿ ತಾಲ್ಲೂಕಿನ ಬೊಮ್ಮವಾರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ 2022-23ನೇ ಸಾಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಕೋರ್ಸ್‌ಗಳ ದಾಖಲಾತಿಗೆ ಅರ್ಜಿ ಸಲ್ಲಿಸಬಹುದು.

ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ 2 ದಿನಗಳವರೆಗೆ ಅರ್ಜಿ ಸ್ವೀಕರಿಸಲಾಗುವುದು. ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಊಟ ಮತ್ತು ವಸತಿ ಹಾಗೂ ಇತರೆ ಸೌಲಭ್ಯ ನೀಡಲಾಗುವುದು.

ADVERTISEMENT

ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರಾದ ಲಕ್ಷ್ಮಿಪತಿ ಮೊ.ಸಂ.: 72596 13001, ಕಿರಣ್ ಕುಮಾರ್ ಮೊ.ಸಂ.: 91102 56424 ಮತ್ತು ನಾಗರತ್ನಮ್ಮ ಮೊ.ಸಂ.: 81055 26933 ಸಂಪರ್ಕಿಸ
ಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.