ADVERTISEMENT

ದೇವನಹಳ್ಳಿ: ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ನೇಮಕ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2024, 7:13 IST
Last Updated 17 ಮಾರ್ಚ್ 2024, 7:13 IST
ದೇವನಹಳ್ಳಿ ಜಿಲ್ಲಾಡಳಿತ ಭವನದಲ್ಲಿ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷರಾಗಿ ನೇಮಕ ಆದ ಬಿ.ರಾಜಣ್ಣ ಅವರನ್ನು ಸತ್ಕಾರಿಸಲಾಯಿತು
ದೇವನಹಳ್ಳಿ ಜಿಲ್ಲಾಡಳಿತ ಭವನದಲ್ಲಿ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷರಾಗಿ ನೇಮಕ ಆದ ಬಿ.ರಾಜಣ್ಣ ಅವರನ್ನು ಸತ್ಕಾರಿಸಲಾಯಿತು   

ದೇವನಹಳ್ಳಿ: ತಾಲ್ಲೂಕಿನ ಬೀರಸಂದ್ರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಜಿಲ್ಲಾ ಅಧ್ಯಕ್ಷರಾಗಿ ಚನ್ನಹಳ್ಳಿ ಬಿ. ರಾಜಣ್ಣ ಆಯ್ಕೆಯಾದರು.

ಈ ವೇಳೆ ಮಾತನಾಡಿದ ಅವರು,  ಗ್ಯಾರಂಟಿಗಳ ಅನುಷ್ಠಾನದಲ್ಲಿನ ಅಡೆತಡೆ ಬಗೆಹರಿಸಿ ಸಮಾಜದ ಪ್ರತಿ ಫಲಾನುಭವಿಗಳಿಗೂ ಗ್ಯಾರಂಟಿ ತಲುಪಿಸಲು ಶ್ರಮಿಸಲಾಗುವುದು ಎಂದರು.

ಬಯಪ್ಪ ಅಧ್ಯಕ್ಷ ವಿ.ಶಾಂತ್ ಕುಮಾರ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಸಂಘಟಿಸಲಾಗುತ್ತದೆ. ರಾಜ್ಯ ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮನದಟ್ಟು ಮಾಡುವ ಪ್ರಯತ್ನ ಮಾಡಲಾಗುತ್ತದೆ ಎಂದರು.

ADVERTISEMENT

ಬಯಪ್ಪ ಸದಸ್ಯರಾದ ಸಿ.ಪ್ರಸನ್ನಕುಮಾ‌ರ್, ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ನಾಗೇಗೌಡ, ನಟರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.